ರಾಷ್ಟ್ರೀಯ ಲಾಂಛನ ವಿವಾದ: ನಾವು ಎತ್ತ ಸಾಗುತ್ತಿದ್ದೇವೆ?- ನಟ ಪ್ರಕಾಶ್ ರೈ
ದೆಹಲಿಯ ಹೊಸ ಸಂಸತ್ ಭವನದ ಮೇಲಿನ ರಾಷ್ಟ್ರೀಯ ಲಾಂಛನ ವಿವಾದಕ್ಕೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಿಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಅವರು, ನಾವು ಎತ್ತ ಸಾಗುತ್ತಿದ್ದೇವೆ ಎಂದು ಪ್ರಶ್ನಿಸುವ ಮೂಲಕ ಆಡಳಿತಾರೂಢ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಚೆನ್ನೈ: ದೆಹಲಿಯ ಹೊಸ ಸಂಸತ್ ಭವನದ ಮೇಲಿನ ರಾಷ್ಟ್ರೀಯ ಲಾಂಛನ ವಿವಾದಕ್ಕೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಿಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಅವರು, ನಾವು ಎತ್ತ ಸಾಗುತ್ತಿದ್ದೇವೆ ಎಂದು ಪ್ರಶ್ನಿಸುವ ಮೂಲಕ ಆಡಳಿತಾರೂಢ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
"ನಾವು ಎತ್ತ ಹೋಗುತ್ತಿದ್ದೇವೆ... #justasking" ಎಂದು ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ. ತಮಿಳು, ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ನಟಿಸಿರುವ ಪ್ರಕಾಶ್ ರೈ, ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ, ಈ 'ಹಿಂದೆ' ಮತ್ತು 'ಈಗ' ಭಗವಾನ್ ರಾಮ ಮತ್ತು ಭಗವಾನ್ ಹನುಮಂತನ ಸಾಂಪ್ರದಾಯಿಕ ಮತ್ತು ಅಸಂಪ್ರದಾಯಿಕ ಚಿತ್ರಗಳನ್ನು ಪೋಸ್ಟ್ ಮಾಡಿದ್ದು, ನಂತರ ಹೊಸ ಸಂಸತ್ತಿನ ಕಟ್ಟಡದ ಮೇಲೆ ಸ್ಥಾಪಿಸಲಾದ ರಾಷ್ಟ್ರೀಯ ಲಾಂಛನದ ತುಲನಾತ್ಮಕ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
ಕಳೆದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ನೂತನ ಸಂಸತ್ ಭವನದ ಮೇಲಿನ ರಾಷ್ಟ್ರೀಯ ಲಾಂಛನ ಹೊಸ ವಿವಾದ ಸೃಷ್ಟಿಸಿದೆ. ಕಾರ್ಯಾಂಗದ ಮುಖ್ಯಸ್ಥರಾಗಿರುವ ಪ್ರಧಾನಿ, ಈ ಲಾಂಛನವನ್ನು ಅನಾವರಣ ಮಾಡಿದ್ದು ಏಕೆ ಎಂದು ವಿರೋಧ ಪಕ್ಷಗಳು ಪ್ರಶ್ನಿಸಿವೆ. ರಾಷ್ಟ್ರೀಯ ಲಾಂಛನವನ್ನು ಮಾರ್ಪಡಿಸಲಾಗಿದೆ ಮತ್ತು ಅವಮಾನಿಸಲಾಗಿದೆ ಎಂದು ವಿಪಕ್ಷಗಳು ಆರೋಪಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


