ದೇಶದಲ್ಲಿ ಕೊರೋನಾ ಏರಿಕೆ: ಒಂದೇ ದಿನ 20,038 ಹೊಸ ಪ್ರಕರಣ ಪತ್ತೆ; 47 ಸಾವು
ದೇಶದಲ್ಲಿ ಕೊರೋನಾ ಏರಿಳಿತ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 47 ಸೋಂಕಿತರು ಸಾವನ್ನಪ್ಪಿದ್ದು, 20, 038 ಹೊಸ ಪ್ರಕರಣ ಪತ್ತೆಯಾಗಿದೆ.

ನವದೆಹಲಿ: ದೇಶದಲ್ಲಿ ಕೊರೋನಾ ಏರಿಳಿತ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 47 ಸೋಂಕಿತರು ಸಾವನ್ನಪ್ಪಿದ್ದು, 20, 038 ಹೊಸ ಪ್ರಕರಣ ಪತ್ತೆಯಾಗಿದೆ.
16,994 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ವಾಪಸ್ಸಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 4,30,45,350ಕ್ಕೆ ಏರಿಕೆಯಾಗಿದ್ದು, ಚೇತರಿಕೆ ಪ್ರಮಾಣ ಶೇ, 98.49 ರಷ್ಟಿದೆ.
ಸದ್ಯ ದೇಶದಲ್ಲಿ 1,39,073 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ. ನಿನ್ನೆ ದಿನ 1,36,076 ಸಕ್ರಿಯ ಪ್ರಕರಣ ದಾಖಲಾಗಿತ್ತು. ಕಳೆದ 24 ಗಂಟೆಗಳಲ್ಲಿ 2,997 ಸಕ್ರಿಯ ಪ್ರಕರಣಗಳ ಏರಿಕೆಯಾಗಿದೆ. 47 ಮಂದಿ ಸಾವಿನೊಂದಿಗೆ ದೇಶದಲ್ಲಿ ಮೃತರ ಒಟ್ಟಾರೇ ಸಂಖ್ಯೆ 5,25,604ಕ್ಕೆ ಏರಿಕೆಯಾಗಿದೆ.
ಇಂದು ದೈನಂದಿನ ಪಾಸಿಟಿವಿ ದರ ಶೇ. 4.44 ರಷ್ಟಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಪ್ರಕಾರ, ನಿನ್ನೆಯವರೆಗೂ 86,86,15,168 ಸ್ಯಾಂಪಲ್ಸ್ ಗಳ ಪರೀಕ್ಷೆ ನಡೆಸಲಾಗಿದೆ. ಇದರೊಂದಿಗೆ ಒಟ್ಟಾರೇ 4,50,820 ಸ್ಯಾಂಪಲ್ಸ್ ಗಳ ಪರೀಕ್ಷೆ ನಡೆಸಲಾಗಿದೆ ಮಾಹಿತಿ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


