ಮಂಕಿಪಾಕ್ಸ್ ನಿರ್ವಹಣೆಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ
ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಂಕಿಪಾಕ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ನವದೆಹಲಿ: ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಂಕಿಪಾಕ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಯುಎಇಯಿಂದ ಹಿಂದಿರುಗಿದ ಕೇರಳ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಇಡೀ ದೇಶದಲ್ಲೇ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿಳಿಸಿದ್ದರು.
ರೋಗಿಯು ಜುಲೈ 12 ರಂದು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದರು.
ಮಾರ್ಗಸೂಚಿಗಳು
- ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಔಷಧಿ ಪಡೆಯಿರಿ ಮತ್ತು ಈ ಬಗ್ಗೆ ಸರಿಯಾಗಿ ಮಾಹಿತಿ ನೀಡಿ
- ಅಂತಾರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯವಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರಬಾರದು
- ಇಲಿಗಳು, ಅಳಿಲುಗಳು, ಮಂಗಗಳು ಮತ್ತು ಸಸ್ತನಿಗಳು ಸೇರಿದಂತೆ ಸತ್ತ ಅಥವಾ ಜೀವಂತ ಕಾಡು ಪ್ರಾಣಿಗಳ ಸಂಪರ್ಕದಿಂದ ದೂರವಿರಬೇಕು
- ಕಾಡು ಪ್ರಾಣಿಗಳ ಮಾಂಸವನ್ನು ತಿನ್ನಬಾರದು
- ಆಫ್ರಿಕಾ ಸೇರಿದಂತೆ ಇತರ ದೇಶಗಳಲ್ಲಿ ಕಾಡು ಪ್ರಾಣಿಗಳಿಂದ ಉತ್ಪಾದಿಸಿದ ಉತ್ಪನ್ನಗಳಾದ ಕ್ರೀಮ್ ಲೋಷನ್‍ಗಳನ್ನು ಬಳಸಬಾರದು ಮತ್ತು ತರಬಾರದು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


