ಉದಯಪುರ ಟೈಲರ್ ಹತ್ಯೆ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಎನ್ ಐಎ ನ್ಯಾಯಾಲಯ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಸರ್ಕಾರಿ ವಕೀಲರು ಶನಿವಾರ ತಿಳಿಸಿದ್ದಾರೆ.

ರಾಜಸ್ಥಾನ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಎನ್ ಐಎ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಸರ್ಕಾರಿ ವಕೀಲರು ಶನಿವಾರ ತಿಳಿಸಿದ್ದಾರೆ.
ಆರೋಪಿಗಳಾದ ರಿಯಾಜ್ ಅಟ್ಟಾರಿ, ಘೌಸ್ ಮೊಹಮ್ಮದ್ ಮತ್ತು ಫರ್ಹಾದ್ ಮೊಹಮ್ಮದ್ ಶೇಕ್ ಅವರನ್ನು ಇಂದು ಬಿಗಿ ಭದ್ರತೆ ನಡುವೆ ಉಗ್ರ ನಿಗ್ರಹ ದಳ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆಗಸ್ಟ್ 1ರವರೆಗೆ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ಕೋರ್ಟ್ ಆದೇಶ ಹೊರಡಿಸಿತು.
ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಮಾಜಿ ವಕ್ತಾರೆ ನೂಪರ್ ಶರ್ಮಾ ಪರ ಫೋಸ್ಟ್ ಹಿನ್ನೆಲೆಯಲ್ಲಿ ಜೂನ್ 28 ರಂದು ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


