ಅಮರನಾಥ ಯಾತ್ರೆ: 6 ಯಾತ್ರಿಗಳ ಸಾವು, ಒಟ್ಟು ಮೃತರ ಸಂಖ್ಯೆ 49ಕ್ಕೆ ಏರಿಕೆ
ಕಳೆದ 36 ಗಂಟೆಗಳಲ್ಲಿ ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಆರು ಯಾತ್ರಿಕರು ಮತ್ತು ಕುದುರೆ ಸವಾರನೊಬ್ಬ ಸ್ವಾಭಾವಿಕವಾಗಿ ಸಾವನ್ನಪ್ಪಿದ್ದಾರೆ.

ಜಮ್ಮು-ಕಾಶ್ಮೀರ: ಕಳೆದ 36 ಗಂಟೆಗಳಲ್ಲಿ ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಆರು ಯಾತ್ರಿಕರು ಮತ್ತು ಕುದುರೆ ಸವಾರನೊಬ್ಬ ಸ್ವಾಭಾವಿಕವಾಗಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತಪಟ್ಟವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಜುಲೈ 8 ರಂದು ಸಂಭವಿಸಿದ್ದ ದಿಢೀರ್ ಪ್ರವಾಹದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡ 15 ಯಾತ್ರಿಗಳು ಕೂಡಾ ಇದರಲ್ಲಿ ಸೇರಿದ್ದಾರೆ. ಜೂನ್ 30 ರಿಂದ ಆರಂಭವಾದ ಯಾತ್ರೆಯಲ್ಲಿ ಈವರೆಗೆ 47 ಯಾತ್ರಿಗಳು ಹಾಗೂ ಇಬ್ಬರು ಕುದುರೆ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಪಹಲ್ಗಾಮ್‌ನ ಆಳವಾದ ಕಂದರಕ್ಕೆ ಕುದುರೆಯಿಂದ ಬಿದ್ದು ಕುದುರೆ ಸಾವನ್ನೊಬ್ಬ ಸಾವನ್ನಪ್ಪಿದ್ದ.
ಜುಲೈ 8 ರಂದು ಗುಹಾ ದೇಗುಲದ ಸಮೀಪ ಸಂಭವಿಸಿದ ಪ್ರವಾಹದಲ್ಲಿ 15 ಯಾತ್ರಿಗಳು ಪ್ರಾಣ ಕಳೆದುಕೊಂಡಿದ್ದರೆ ಸುಮಾರು 55 ಜನರು ಗಾಯಗೊಂಡಿದ್ದರು. ಇಲ್ಲಿಯವರೆಗೆ 1.5 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಗುಹಾ ದೇಗುಲಕ್ಕೆ ಭೇಟಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


