ದೇಶ

ಸಂಸತ್ ಮುಂಗಾರು ಅಧಿವೇಶನದಲ್ಲಿ ಡಿಜಿಟಲ್ ಮಾಧ್ಯಮ ನಿಯಂತ್ರಿಸುವ ಮಸೂದೆ ಸೇರಿ 23 ಮಸೂದೆ ಮಂಡನೆ

ಮುಂಬರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ, 2022 ಸೇರಿದಂತೆ 24 ಹೊಸ ಮಸೂದೆಗಳನ್ನು ಮಂಡಿಸಲಾಗುತ್ತಿದೆ.

ಸಂಸತ್ ಮುಂಗಾರು ಅಧಿವೇಶನದಲ್ಲಿ ಡಿಜಿಟಲ್ ಮಾಧ್ಯಮ ನಿಯಂತ್ರಿಸುವ ಮಸೂದೆ ಸೇರಿ 23 ಮಸೂದೆ ಮಂಡನೆ
ಸಂಸತ್ತು
Published On :

ನವದೆಹಲಿ: ಮುಂಬರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ, 2022 ಸೇರಿದಂತೆ 24 ಹೊಸ ಮಸೂದೆಗಳನ್ನು ಮಂಡಿಸಲಾಗುತ್ತಿದೆ.

"ಪುಸ್ತಕಗಳ ಮುದ್ರಣ ಮತ್ತು ನೋಂದಣಿ (ಪಿಆರ್‌ಬಿ) ಕಾಯಿದೆ 1867 ಬದಲಾಗಿ ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ, 2022 ಅನ್ನುಜಾರಿಗೆ ತರಲಾಗುತ್ತಿದೆ.

ಪತ್ರಿಕೆಗಳಿಗೆ ಸಮಾನವಾಗಿ ಡಿಜಿಟಲ್ ಮಾಧ್ಯಮವನ್ನು ತರಲು ಪ್ರಸ್ತಾಪಿಸುವ ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆಯ ಅಡಿಯಲ್ಲಿ, ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ನೋಂದಣಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಕ್ಯಾಬಿನೆಟ್ ಇನ್ನೂ ಕೈಗೆತ್ತಿಕೊಳ್ಳದ ಮಸೂದೆಯು "ಯಾವುದೇ ಎಲೆಕ್ಟ್ರಾನಿಕ್ ಸಾಧನದ ಮೂಲಕ ಡಿಜಿಟಲ್ ಮಾಧ್ಯಮದಲ್ಲಿ ಸುದ್ದಿ" ಅನ್ನು ಸೇರಿಸಲು ಪ್ರಸ್ತಾಪಿಸುತ್ತದೆ.

ಸಣ್ಣ ಪ್ರಕಾಶಕರು ಮತ್ತು ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಈ ಮಸೂದೆಯನ್ನು ತರಲಾಗುತ್ತಿದೆ ಎಂದು ಹೇಳಲಾಗಿರುವುದರಿಂದ ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಬಹುದು. ದೇಶದಲ್ಲಿ ವಿರೋಧಿಗಳ ಧ್ವನಿ ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಈಗಾಗಲೇ ಆರೋಪಿಸಿವೆ.

ಮತ್ತೊಂದು ಪ್ರಮುಖ ಮಸೂದೆಯೆಂದರೆ ಇಂಧನ ಸಂರಕ್ಷಣೆ(ತಿದ್ದುಪಡಿ) ಮಸೂದೆ, 2022. ಇದು ಭಾರತದಲ್ಲಿ ಕಾರ್ಬನ್ ವ್ಯಾಪಾರಕ್ಕೆ ನಿಯಂತ್ರಣ ಚೌಕಟ್ಟನ್ನು ಒದಗಿಸಲು ಪ್ರಯತ್ನಿಸುತ್ತದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.