ಉತ್ತರ ಪ್ರದೇಶ: ಪ್ರಧಾನಿ ಮೋದಿಯಿಂದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿ ಶನಿವಾರ 296 ಕಿ.ಮೀ ಉದ್ದದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟಿಸಿದರು. ಇದು ಉತ್ತರ ಪ್ರದೇಶದ ಏಳು ಜಿಲ್ಲೆಗಳ ಮೂಲಕ ಸಾಗಲಿದ್ದು, ಸುಮಾರು 14, 850 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಜಲೌನ್: ಪ್ರಧಾನಿ ನರೇಂದ್ರ ಮೋದಿ ಶನಿವಾರ 296 ಕಿ.ಮೀ ಉದ್ದದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟಿಸಿದರು. ಇದು ಉತ್ತರ ಪ್ರದೇಶದ ಏಳು ಜಿಲ್ಲೆಗಳ ಮೂಲಕ ಸಾಗಲಿದ್ದು, ಸುಮಾರು 14, 850 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಜಿಲ್ಲೆಯ ಒರೈ ತೆಹಸಿಲ್ ನ ಕೈಥೇರಿ ಗ್ರಾಮದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತಿತರರು ಉಪಸ್ಥಿತರಿದ್ದರು. 2020, ಫೆಬ್ರವರಿ 29 ರಂದು ಈ ಎಕ್ಸ್ ಪ್ರೆಸ್ ವೇ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕಿದ್ದರು. 28 ತಿಂಗಳುಗಳಲ್ಲಿ ಇದು ಪೂರ್ಣಗೊಂಡಿದೆ.
ಚಿತ್ರಕೂಟ ಜಿಲ್ಲೆಯ ಎನ್ ಹೆಚ್ -35 ಗೋಡಾ ಹಳ್ಳಿಯಿಂದ ಇಟಾವಾ ಜಿಲ್ಲೆಯ ಕುದುರೆಲ್ ಗ್ರಾಮದವರೆಗೂ ವಿಸ್ತರಣೆಯಾಗಿದೆ. ಅಲ್ಲಿ ಆಗ್ರಾ- ಲಖನೌ ಎಕ್ಸ್ ಪ್ರೆಸ್ ನೊಂದಿಗೆ ಸೇರಿಕೊಳ್ಳುತ್ತದೆ. ನಾಲ್ಕು ಪಥದ ಎಕ್ಸ್ ಪ್ರೆಸ್ ವೇ ನಂತರ ಆರು ಪಥಗಳಾಗಿ ವಿಸ್ತರಣೆಯಾಗಿದ್ದು, ಚಿತ್ರಕೂಟ, ಬಾಂಡಾ, ಮಹೊಬಾ, ಹಮಿರ್ ಪುರ್, ಜಲೌನ್, ಔರೈಯಾ ಮತ್ತು ಇಟವಾ ನಗರಗಳ ಮೂಲಕ ಸಾಗುತ್ತದೆ.
ಈ ವಲಯದಲ್ಲಿ ಸಂಪರ್ಕ ಸುಧಾರಣೆ ಅಲ್ಲದೇ, ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಕೊಡುಗೆ ನೀಡಲಿದ್ದು, ಸ್ಥಳೀಯ ಜನರಿಗೆ ಸಾವಿರಾರು ಉದ್ಯೋಗ ಸೃಷ್ಟಿಸಲಿದೆ ಎಂಬುದು ಸರ್ಕಾರದ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


