ದೇಶ

ದೇಶದಲ್ಲಿ ಒಂದೇ ದಿನ ಕೊರೋನಾಗೆ 49 ಬಲಿ: 20,528 ಹೊಸ ಪ್ರಕರಣ ಪತ್ತೆ, 1,43,449 ಸಕ್ರಿಯ ಪ್ರಕರಣಗಳು

ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 20, 528 ಹೊಸ ಪ್ರಕರಣ ಪತ್ತೆಯಾಗಿದೆ. 49 ಸೋಂಕಿತರು ಸಾವಿನೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 5,25,709ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ದೇಶದಲ್ಲಿ ಒಂದೇ ದಿನ ಕೊರೋನಾಗೆ 49 ಬಲಿ: 20,528 ಹೊಸ ಪ್ರಕರಣ ಪತ್ತೆ, 1,43,449 ಸಕ್ರಿಯ ಪ್ರಕರಣಗಳು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 20, 528 ಹೊಸ ಪ್ರಕರಣ ಪತ್ತೆಯಾಗಿದೆ. 49 ಸೋಂಕಿತರು ಸಾವಿನೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 5,25,709ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 17,790 ಸೋಂಕಿತರು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದಾರೆ. ಇದರೊಂದಿಗೆ ಒಟ್ಟಾರೇ ಗುಣಮುಖರಾದವರ ಸಂಖ್ಯೆ 4,30,81,441ಕ್ಕೆ ಏರಿಕೆಯಾಗಿದೆ.  ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 2,689 ಪ್ರಕರಣಗಳು ಏರಿಕೆಯಾಗಿದ್ದು,  ದೇಶದಲ್ಲಿ ಸದ್ಯ 1,43,449 ಸಕ್ರಿಯ ಪ್ರಕರಣಗಳಿವೆ.

 ರಾಷ್ಟ್ರೀಯ ಕೋವಿಡ್-19 ಚೇತರಿಕೆ ಪ್ರಮಾಣ ಶೇ. 98.47 ರಷ್ಟಿದ್ದು, ಮರಣ ಪ್ರಮಾಣ ಶೇ. 1.20 ರಷ್ಟು ದಾಖಲಾಗಿದೆ.  ದೇಶಾದ್ಯಂತ ಒಟ್ಟಾರೇ 2 ಬಿಲಿಯನ್ ಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.