ದೇಶ

ರಾಷ್ಟ್ರಪತಿ ಚುನಾವಣೆ ಆರಂಭ: ಪ್ರಧಾನಿ ಮೋದಿ ಸೇರಿದಂತೆ ಚುನಾಯಿತ ಸಂಸದರು, ಶಾಸಕರಿಂದ ಮತದಾನ

ದೇಶದ 16ನೇ ರಾಷ್ಟ್ರಪತಿ ಚುನಾವಣೆಗಾಗಿ ಮತದಾನ ಆರಂಭವಾಗಿದೆ. ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಮತದಾನ ನಡೆಯುತ್ತಿದ್ದು, ಚುನಾಯಿತ ಸಂಸದರು ಹಾಗೂ ರಾಜ್ಯಗಳ ವಿಧಾನಸಭೆ ಸದಸ್ಯರು ಮತ ಚಲಾಯಿಸುತ್ತಿದ್ದಾರೆ.

ರಾಷ್ಟ್ರಪತಿ ಚುನಾವಣೆ ಆರಂಭ: ಪ್ರಧಾನಿ ಮೋದಿ ಸೇರಿದಂತೆ ಚುನಾಯಿತ ಸಂಸದರು, ಶಾಸಕರಿಂದ ಮತದಾನ
ಪ್ರಧಾನಿ ಮೋದಿ ಮತದಾನದ ಚಿತ್ರ
Published On :

ನವದೆಹಲಿ: ದೇಶದ 16ನೇ ರಾಷ್ಟ್ರಪತಿ ಚುನಾವಣೆಗಾಗಿ ಮತದಾನ ಆರಂಭವಾಗಿದೆ. ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಮತದಾನ ನಡೆಯುತ್ತಿದ್ದು, ಚುನಾಯಿತ ಸಂಸದರು ಹಾಗೂ ರಾಜ್ಯಗಳ ವಿಧಾನಸಭೆ ಸದಸ್ಯರು ಮತ ಚಲಾಯಿಸುತ್ತಿದ್ದಾರೆ.

ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್,  ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್,  ಸಂಸದ ಶಿವಕುಮಾರ್ ಉದಾಸಿ ಸೇರಿದಂತೆ ಹಲವು ಮಂದಿ ಮತ ಚಲಾಯಿಸಿದರು.

ಇನ್ನೂ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲಖನೌ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಮಿಳುನಾಡಿನಲ್ಲಿ ಸಿಎಂ ಎಂ. ಕೆ. ಸ್ಟಾಲಿನ್, ಆಂಧ್ರ ಪ್ರದೇಶದಲ್ಲಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ, ಉತ್ತರ ಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತಿತರರು ಮತದಾನ ಮಾಡಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ ಮತ್ತಿತರರು ಮತ ಚಲಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.