ರಾಷ್ಟ್ರಪತಿ ಚುನಾವಣೆ; ವ್ಹೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ರಾಷ್ಟ್ರಪತಿ ಚುನಾವಣೆಯಲ್ಲಿ ಮತಚಲಾಯಿಸಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರ ವ್ಹೀಲ್ ಚೇರ್ ನಲ್ಲಿ ಆಗಮಿಸಿದ್ದರು. 89 ವರ್ಷದ ಮನಮೋಹನ್ ಸಿಂಗ್ ಅವರು ಮೊದಲ ಬಾರಿಗೆ ಸಂಸತ್ ಭವನದಲ್ಲಿ...

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಮತಚಲಾಯಿಸಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರ ವ್ಹೀಲ್ ಚೇರ್ ನಲ್ಲಿ ಆಗಮಿಸಿದ್ದರು. 89 ವರ್ಷದ ಮನಮೋಹನ್ ಸಿಂಗ್ ಅವರು ಮೊದಲ ಬಾರಿಗೆ ಸಂಸತ್ ಭವನದಲ್ಲಿ ಗಾಲಿಕುರ್ಚಿಯಲ್ಲಿ ಕಾಣಿಸಿಕೊಂಡರು. ಕಾಂಗ್ರೆಸ್ ನಾಯಕ ಸಿಂಗ್ ಮತ ಚಲಾಯಿಸಲು ನಾಲ್ವರು ಅಧಿಕಾರಿಗಳು ಸಹಾಯ ಮಾಡಿದರು.
ಮತದಾನದ ಮೊದಲ ಗಂಟೆಯಲ್ಲಿ ಮನಮೋಹನ್ ಸಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದ್ದು ಕಂಡುಬಂತು.
ಹಲವು ವರ್ಷಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ಮನಮೋಹನ್ ಸಿಂಗ್ ಅವರನ್ನು ಅನೇಕ ಕಾಂಗ್ರೆಸ್ ನಾಯಕರು ಮಾಜಿ ಪ್ರಧಾನಿ ಸಿಂಗ್ ರನ್ನು ಸ್ಫೂರ್ತಿ ಎಂದು ಕರೆದರು.
ಆರೋಗ್ಯ ಹದಗೆಟ್ಟಿದ್ದರೂ ಪ್ರಜಾಸತ್ತಾತ್ಮಕ ಜವಾಬ್ದಾರಿಯನ್ನು ಪೂರೈಸಲು ಸಂಸತ್ತನ್ನು ತಲುಪಿದ ಸರ್ದಾರ್ ಮನಮೋಹನ್ ಸಿಂಗ್ ಅವರು ನಮಗೆಲ್ಲ ಸ್ಫೂರ್ತಿ, ದೇವರು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ.
ಮನಮೋಹನ್ ಸಿಂಗ್ ಅವರು ಆದಷ್ಟು ಬೇಗ ಉತ್ತಮ ಆರೋಗ್ಯವನ್ನು ಮರಳಿ ಪಡೆಯಲಿ ಎಂದು ಹಲವರು ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


