ಆನೆ ಹಂತಕರ ರಕ್ಷಣೆ: ಮನೇಕಾ ಗಾಂಧಿ ಆರೋಪ ತಳ್ಳಿಹಾಕಿದ ಪ್ರಜ್ವಲ್ ರೇವಣ್ಣ
ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಹಾಸನ ಸಂಸದ ರೇವಣ್ಣ ತಳ್ಳಿಹಾಕಿದ್ದಾರೆ.

ನವದೆಹಲಿ: ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಹಾಸನ ಸಂಸದ ರೇವಣ್ಣ ತಳ್ಳಿಹಾಕಿದ್ದಾರೆ.
ಇತ್ತೀಚೆಗೆ ಹಾಸನ ಜಿಲ್ಲೆಯ ವೀರಾಪುರದಲ್ಲಿ ಆನೆಗೆ ವಿದ್ಯುತ್ ಶಾಕ್ ಕೊಟ್ಟು ಹತ್ಯೆ ಮಾಡಿ ದಂತಗಳನ್ನು ತೆಗೆದ ಪ್ರಕರಣದಲ್ಲಿ ಹಂತಕರನ್ನು ಪ್ರಜ್ವಲ್ ರೇವಣ್ಣ ರಕ್ಷಿಸುತ್ತಿದ್ದಾರೆ ಎಂದು ಮನೇಕಾ ಗಾಂಧಿ ಆರೋಪಿಸಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದರು.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಜ್ವಲ್ ರೇವಣ್ಣ, ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ. ಅವರೇ ಈ ಬಗ್ಗೆ ಗಂಭೀರವಾದ ತನಿಖೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈ ವಿಷಯವನ್ನು ವಿವರವಾಗಿ ಅಧ್ಯಯನ ಮಾಡಿದ ಬಳಿಕ ಮನೇಕಾ ಗಾಂಧಿ ಅವರು ವಿಷಯ ಪ್ರಸ್ತಾಪಿಸಬಹುದಾಗಿತ್ತು ಎಂದು ಹೇಳಿರುವ ಸಂಸದರು, ತಮಗೆ ಆನೆ ಸಾವನ್ನಪ್ಪಿದ್ದ ಮಾಹಿತಿ ತಿಳಿದಿತ್ತು. ಆದರೆ ದಂತ ತೆಗೆದು ಹೂತು ಹಾಕಿರುವ ಮಾಹಿತಿ ತಿಳಿದಿರಲಿಲ್ಲ ಎಂದಿದ್ದಾರೆ.
ನಾನು ಪ್ರಕರಣವನ್ನು ಹಾಸನ ನಗರಕ್ಕೆ ವರ್ಗಾಯಿಸುವಂತೆ ಪೊಲೀಸರಿಗೆ ಒತ್ತಡ ಹೇರಿರಲಿಲ್ಲ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದು ಬಿಜೆಪಿ ಈ ಆರೋಪವನ್ನು ಸಾಬೀತುಪಡಿಸಿದಲ್ಲಿ ಯಾವುದೇ ಕ್ರಮ ಎದುರಿಸಲೂ ಸಿದ್ಧ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


