ದೆಹಲಿಯಲ್ಲಿ ಭಾರೀ ಮಳೆ: 7 ವಿಮಾನಗಳ ಮಾರ್ಗ ಬದಲಾವಣೆ, 40 ವಿಮಾನ ವಿಳಂಬ
ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಏಳು ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಅಲ್ಲದೆ 40 ವಿಮಾನ ಸೇವೆಗಳು ವಿಳಂಬವಾಗಿವೆ ಎಂದು ವರದಿಯಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಏಳು ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಅಲ್ಲದೆ 40 ವಿಮಾನ ಸೇವೆಗಳು ವಿಳಂಬವಾಗಿವೆ ಎಂದು ವರದಿಯಾಗಿದೆ.
ಬುಧವಾರ ಕೆಟ್ಟ ಹವಾಮಾನದಿಂದಾಗಿ ಕನಿಷ್ಠ 25 ವಿಮಾನಗಳ ನಿರ್ಗಮನ ಮತ್ತು 15 ವಿಮಾನಗಳ ಆಗಮನ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯಿಂದಾಗಿ ನಗರದ ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ದೆಹಲಿಯಲ್ಲಿ ಭಾರೀ ಮಳೆಯಿಂದಾಗಿ ಮುಂಬೈ-ದೆಹಲಿ ಎರಡು ವಿಮಾನಗಳನ್ನು ಜೈಪುರ ಮತ್ತು ಇಂದೋರ್‌ಗೆ ಮಾರ್ಗ ಬದಲಿಸಲಾಗಿದೆ ಎಂದು ವಿಸ್ತಾರಾ ಟ್ವಿಟರ್‌ನಲ್ಲಿ ತಿಳಿಸಿದೆ.
ದೆಹಲಿಯಲ್ಲಿ ಕನಿಷ್ಠ ತಾಪಮಾನ 28.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗರಿಷ್ಠ ತಾಪಮಾನವು ಸುಮಾರು 33 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಗೊಳ್ಳುವ ಸಾಧ್ಯತೆಯಿದೆ. ಭಾರತದ ಹವಾಮಾನ ಇಲಾಖೆ (IMD) ಎರಡು-ಮೂರು ದಿನಗಳ ಕಾಲ ವಾಯುವ್ಯ ಭಾರತದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


