ರಾಜಸ್ಥಾನ: ಅಕ್ರಮ ಗಣಿಗಾರಿಕೆ ವಿರೋಧಿಸಿ ಬೆಂಕಿ ಹಚ್ಚಿಕೊಂಡು ಸಾಧು ಆತ್ಮಹತ್ಯೆಗೆ ಯತ್ನ; ಗಂಭೀರ ಸ್ಥಿತಿ!
ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಪಸೋಪಾ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ವಿರೋಧಿಸಿ ಸಾಧುಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಜೈಪುರ: ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಪಸೋಪಾ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ವಿರೋಧಿಸಿ ಸಾಧುಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಸಾಧು 65 ವರ್ಷದ ಬಾಬಾ ವಿಜಯ್ ದಾಸ್ ಎಂಬುವರನ್ನು ಪೊಲೀಸರು ರಕ್ಷಿಸಿದ್ದು 80ರಷ್ಟು ಸುಟ್ಟಗಾಯಗಳಾಗಿದೆ. ಅವರನ್ನು ಭರತ್‌ಪುರದ ರಾಜ್ ಬಹದ್ದೂರ್ ಸ್ಮಾರಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.
ಜಿಲ್ಲೆಯ ದೀಗ್ ಪ್ರದೇಶದ ಆದಿಬದ್ರಿ ಧಾಮ್ ಮತ್ತು ಕಂಕಂಚಲ್‌ನಲ್ಲಿ ಅಕ್ರಮ ಗಣಿಗಾರಿಕೆ ವಿರೋಧಿಸಿ ಸಾಧು 550 ದಿನಗಳಿಂದ ಚಳುವಳಿ ನಡೆಸುತ್ತಿದ್ದರು. ಶ್ರೀಕೃಷ್ಣ ಬಾಲ್ಯದಲ್ಲಿ ಆಡುತ್ತಿದ್ದದ್ದು ಇಲ್ಲಿಯೇ ಎಂದು ನಂಬಿರುವ ಸಾಧುಗಳು ಇದು ಭಗವಂತನೊಂದಿಗಿನ ಸಂಪರ್ಕಕ್ಕಾಗಿ ಪ್ರಸಿದ್ಧವಾಗಿರುವ ಬ್ರಜ್ ಪ್ರದೇಶದ ಪವಿತ್ರ ಭಾಗವಾಗಿದೆ.
ಮೂಲಗಳ ಪ್ರಕಾರ, ವಿಜಯ ದಾಸ್ ಪ್ರತಿಭಟನಾ ಸ್ಥಳದ ಹಿಂದೆ ಹೋಗಿ ತನ್ನ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡರು. ನಂತರ ರಾಧೆ-ರಾಧೆ ಎಂದು ಕೂಗಿ ಓಡತೊಡಗಿದರು. ಬೆಂಕಿ ಹೆಚ್ಚುತ್ತಿರುವುದನ್ನು ಕಂಡು ಸ್ಥಳದಲ್ಲಿ ಕೋಲಾಹಲ ಉಂಟಾಗಿದ್ದು, ಅವರನ್ನು ರಕ್ಷಿಸಲು ಕರ್ತವ್ಯದಲ್ಲಿದ್ದ ಪೊಲೀಸರು ಹರಸಾಹಸ ಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


