ಜುಲೈ 25ಕ್ಕೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಲು ಸೋನಿಯಾಗೆ ಇಡಿ ಸಮನ್ಸ್
ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಗೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಕೋವಿಡ್-19 ನಿಂದ ಚೇತರಿಸಿಕೊಂಡಿರುವ 73 ವರ್ಷದ ಸೋನಿಯಾ ಗಾಂಧಿ ಅವರನ್ನು ಇಂದು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಆಕೆಯ ಮನವಿ ಮೇರೆಗೆ ವಿಚಾರಣೆಯನ್ನು ಅಂತ್ಯಗೊಳಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದಾಗ್ಯೂ, ಮುಂದಿನ ವಿಚಾರಣೆ ಇಲ್ಲ ಎಂದು ಇಡಿ ಸೋನಿಯಾ ಗಾಂಧಿಗೆ ತಿಳಿಸಿರುವುದಾಗಿ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಹೇಳಿದ್ದಾರೆ.
ಇತರ ಯಾವುದೇ ವಿಚಾರಣೆಯಿದ್ದರೆ ಅಗತ್ಯವಿದ್ದರೆ ರಾತ್ರಿ 8 ಗಂಟೆಯಲ್ಲ, 9 ಗಂಟೆಯವರೆಗೂ ಉತ್ತರಿಸಲು ಸೋನಿಯಾ ಗಾಂಧಿ ಸಿದ್ದರಿದ್ದರು ಎಂದು ರಮೇಶ್ ಟ್ವೀಟರ್ ಫೋಸ್ಟ್ ನಲ್ಲಿ ತಿಳಿಸಿದ್ದಾರೆ. ಗುರುವಾರ ಅಥವಾ ಶುಕ್ರವಾರ ಅಂತಾ ಇಡಿ ಏನನ್ನೂ ಕೇಳಿಲ್ಲ. ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಸೋನಿಯಾ ಗಾಂಧಿ ಹೇಳಿರುವುದಾಗಿ ರಮೇಶ್ ತಿಳಿಸಿದ್ದಾರೆ.
ಮತ್ತೆ 26 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲು ಉದ್ದೇಶಿಸಲಾಗಿತ್ತು. ಆದರೆ, ಆಕೆಯ ಒತ್ತಾಯದ ಮೇರೆಗೆ ಜುಲೈ 25 ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


