ಹುಟ್ಟುಹಬ್ಬದ ದಿನ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ!
ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.

ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.
ರಾಜ್ಯದ ಹಿರಿಯ ಮುತ್ಸದಿ ರಾಜಕಾರಣಿ, ಸೋನಿಯಾ ಗಾಂಧಿ ಅವರ ಆಪ್ತರಲ್ಲಿ ಒಬ್ಬರಾಗಿರುವ ಖರ್ಗೆ 80 ವಸಂತಗಳನ್ನು ಪೂರೈಸಿರುವ 81 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಆದರೆ, ಹುಟ್ಟುಹಬ್ಬದ ಸಂಭ್ರಮದಲ್ಲಿರಬೇಕಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಪೊಲೀಸ್ ಠಾಣೆಯಲ್ಲಿ ಕಾಲ ಕಳೆಯುವಂತಾಗಿದೆ.
ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದರಿಂದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಕಿಂಗ್ ಸ್ವೆ ಕ್ಯಾಂಪ್ ಪೊಲೀಸ್ ಠಾಣೆಗೆ ಕರೆದೊಯ್ದರು. ಇದರಿಂದಾಗಿ ಹುಟ್ಟಹಬ್ಬದ ದಿನ ಖರ್ಗೆ ಅಲ್ಲಿಯೇ ಕಾಲ ಕಳೆಯುವಂತಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


