ದುರಹಂಕಾರಿ, ಸರ್ವಾಧಿಕಾರಿ ಸರ್ಕಾರದ ವಿರುದ್ಧ ಸತ್ಯಕ್ಕೆ ಜಯ ದೊರೆಯಲಿದೆ: ರಾಹುಲ್ ಗಾಂಧಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೊಳಪಡಿಸಿರುವಂತೆಯೇ ಇತ್ತ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಕಿಡಿ ಕಾರಿದ್ದಾರೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೊಳಪಡಿಸಿರುವಂತೆಯೇ ಇತ್ತ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಕಿಡಿ ಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ದುರಹಂಕಾರಿ ಹಾಗೂ ಸರ್ವಾಧಿಕಾರಿ ಸರ್ಕಾರದ ಧೋರಣೆಯ ವಿರುದ್ಧ ಸತ್ಯಕ್ಕೆ ಜಯ ಸಿಗಲಿದೆ ಎಂದು ಹೇಳಿದ್ದಾರೆ.
'ಸಂಸತ್ ಅಧಿವೇಶನದಲ್ಲಿ ಬೆಲೆ ಏರಿಕೆ, ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರಿಕೆ, ತನಿಖಾ ಸಂಸ್ಥೆಗಳ ದುರ್ಬಳಕೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲು ಸಿದ್ಧರಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
'ಜಿಎಸ್‌ಟಿ ವಿಷಯದಲ್ಲಿ ಚರ್ಚೆ ಮಾಡಿ ಎಂದು ಮನವಿ ಮಾಡಿದಾಗ ಸದನ ಮುಂದೂಡಲಾಗುತ್ತದೆ. ಬೆಲೆ ಏರಿಕೆ ಬಗ್ಗೆ ಚರ್ಚಿಸಲು ಹೇಳಿದಾಗ ಕಲಾಪ ಮುಂದೂಡಲಾಗುತ್ತದೆ. ಅಗ್ನಿಪಥ ಯೋಜನೆ ಬಗ್ಗೆ ಚರ್ಚಿಸಲು ತಿಳಿಸಿದಾಗ ಸದನ ಮುಂದೂಡಲಾಗುತ್ತದೆ. ಏಜೆನ್ಸಿಗಳ ದುರುಪಯೋಗದ ಬಗ್ಗೆ ಚರ್ಚೆ ಮಾಡಲು ಮನವಿ ಮಾಡಿದಾಗ ಸದನ ಮುಂದೂಡಲಾಗುತ್ತದೆ ಎಂದು ರಾಹುಲ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ದೇಶದ ಜನಸಾಮಾನ್ಯರ ಧ್ವನಿಯನ್ನು ದಮನ ಮಾಡಲಾಗುತ್ತಿದ್ದು, ಈ ದುರಹಂಕಾರಿ ಹಾಗೂ ಸರ್ವಾಧಿಕಾರಿ ಸರ್ಕಾರದ ವಿರುದ್ಧ ಸತ್ಯಕ್ಕೆ ಜಯ ಸಿಗಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇನ್ನು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಗುರುವಾರ ವಿಚಾರಣೆ ನಡೆಸಿದ್ದಾರೆ. ಇದನ್ನು ವಿರೋಧಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಸದನದಲ್ಲೂ ಕಾಂಗ್ರೆಸ್ ಪ್ರತಿಭಟನೆ ಕೂಗು ಜೋರಾಗಿದ್ದರಿಂದ ಗುರುವಾರವೂ ಕಲಾಪಕ್ಕೆ ಅಡ್ಡಿಯಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


