ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆ ಹೊಂದಿ, ತಮ್ಮ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆ ಹೊಂದಿ, ತಮ್ಮ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು. ಇದಕ್ಕೂ ಮುನ್ನ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ ನಂತರ ಸಂಸತ್ ಭವನಕ್ಕೆ ಆಗಮಿಸಿದ ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆತ್ಮೀಯವಾಗಿ ಸ್ವಾಗತ ನೀಡಿ ಬರಮಾಡಿಕೊಂಡರು.
ಈ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ನೋಡಲು ಅವಕಾಶ ಸಿಕ್ಕಿರುವುದು ಸಂತಸವನ್ನುಂಟು ಮಾಡಿದೆ ಎಂದರು.
ನಂತರ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗಡೆ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ಮೋದಿಗೆ ಅವರಿಗೆ ಮಾಲಾರ್ಪಣೆ ಮಾಡಿ ಗೌರವಿಸಿದರು.
Sri Veerendra Heggade, Dharmadhikaari of Dharmasthala Manjunatha meets PM @narendramodi after taking oath as Rajyasabha member on Thursday at Delhi @NewIndianXpress @santwana99 @Cloudnirad @ramupatil_TNIE pic.twitter.com/WclTEaY8HL
— Ashwini M Sripad/ಅಶ್ವಿನಿ ಎಂ ಶ್ರೀಪಾದ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


