ದೇಶ

ಸೋನಿಯಾ, ರಾಹುಲ್ 'ಲೂಟಿ' ಬಗ್ಗೆ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಸ್ಮೃತಿ ಇರಾನಿ

ತಮ್ಮ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ 5,000 ಕೋಟಿ ರೂಪಾಯಿ ಲೂಟಿಯ...

ಸೋನಿಯಾ, ರಾಹುಲ್ 'ಲೂಟಿ' ಬಗ್ಗೆ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಸ್ಮೃತಿ ಇರಾನಿ
ಸ್ಮೃತಿ ಇರಾನಿ
Published On :

ನವದೆಹಲಿ: ತಮ್ಮ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ 5,000 ಕೋಟಿ ರೂಪಾಯಿ ಲೂಟಿಯ ಬಗ್ಗೆ ಧ್ವನಿ ಎತ್ತಿದ್ದಕ್ಕೆ ನನ್ನ ಮಗಳು, ಕಾಲೇಜು ವಿದ್ಯಾರ್ಥಿನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಆರೋಪದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ನನ್ನ ಮಗಳು ಕಾಲೇಜು ವಿದ್ಯಾರ್ಥಿನಿ, ಬಾರ್‌ ನಡೆಸುವುದಿಲ್ಲ. ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಹಾಗೂ ರಾಹುಲ್‌ ಗಾಂಧಿ 5 ಸಾವಿರ ಕೋಟಿ ರೂ. ಲೂಟಿ ಮಾಡಿರುವ ಬಗ್ಗೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿಯಾದ ನನ್ನ ಮಗಳ ವಿರುದ್ಧ ಆರೋಪ ಮಾಡಲಾಗುತ್ತಿದೆ. ನನ್ನ ಮಗಳು ಯಾವುದೇ ತಪ್ಪು ಮಾಡಿದ್ದರೂ, ಅದರ ವಿರುದ್ಧ ಸಾಕ್ಷಿ ನೀಡುವಂತೆಯೂ ಕಾಂಗ್ರೆಸ್‌ಗೆ ಸವಾಲು ಹಾಕಿದರು.

ಸೋನಿಯಾ ಮತ್ತು ರಾಹುಲ್ ಗಾಂಧಿ 5,000 ಕೋಟಿ ರೂಪಾಯಿ ಲೂಟಿ ಮಾಡಿದ ಬಗ್ಗೆ ನಾನು ಪತ್ರಿಕಾಗೋಷ್ಠಿ ನಡೆಸಿದ್ದು ನನ್ನ ಮಗಳ ತಪ್ಪು. ರಾಹುಲ್ ಗಾಂಧಿ ವಿರುದ್ಧ ಹೋರಾಡಿದ್ದು ಮತ್ತು 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಅವರ ತಾಯಿ ವಿರುದ್ಧ ನಾನು ಸ್ಪರ್ಧಿಸಿದ್ದೇ ನನ್ನ ಮಗಳು ಮಾಡಿದ ತಪ್ಪು ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದರು.

2024 ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಮತ್ತು ನಾನು ಮತ್ತೆ ಅವರನ್ನು ಸೋಲಿಸಿ ಮನೆಗೆ ಕಳಿಸುತ್ತೇನೆ ಎಂದು ಕೇಂದ್ರ ಸಚಿವೆ ಪ್ರತಿಜ್ಞೆ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.