ದೇಶ

ಬಿಹಾರ: ಪಟಾಕಿ ಉದ್ಯಮಿ ಮನೆಯಲ್ಲಿ ಸ್ಫೋಟ, 6 ಮಂದಿ ಸಾವು, 8 ಜನರಿಗೆ ಗಾಯ

ಪಟಾಕಿ ಉದ್ಯಮಿಯೊಬ್ಬರ ಮನೆಯಲ್ಲಿ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ಸರನ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಖುದಾಯಿ ಬಾಗ್ ಗ್ರಾಮದಲ್ಲಿ ನಡೆದಿದೆ.

ಬಿಹಾರ: ಪಟಾಕಿ ಉದ್ಯಮಿ ಮನೆಯಲ್ಲಿ ಸ್ಫೋಟ, 6 ಮಂದಿ ಸಾವು, 8 ಜನರಿಗೆ ಗಾಯ
ಪಟಾಕಿ ದುರಂತ (ಸಾಂಕೇತಿಕ ಚಿತ್ರ)
Published On :

ಬಿಹಾರ: ಪಟಾಕಿ ಉದ್ಯಮಿಯೊಬ್ಬರ ಮನೆಯಲ್ಲಿ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ಸರನ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಖುದಾಯಿ ಬಾಗ್ ಗ್ರಾಮದಲ್ಲಿ ನಡೆದಿದೆ.

ಉದ್ಯಮಿಯನ್ನು ಶಬೀರ್ ಹುಸೇನ್ ಎಂದು ಗುರುತಿಸಲಾಗಿದೆ. ಸ್ಫೋಟದಿಂದಾಗಿ ಮನೆಯ ಒಂದು ಭಾಗ ಸ್ಫೋಟಗೊಂಡಿದ್ದು, ಉಳಿದ ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪೊಲೀಸರ ಪ್ರಕಾರ ಮನೆಯು ನದಿಯ ದಡದಲ್ಲಿದ್ದು ಮನೆಯ ಪ್ರಮುಖ ಭಾಗವು ಕುಸಿದಿದೆ.

ಅವಶೇಷಗಳಡಿ ಸಿಲುಕಿ ಗಾಯಗೊಂಡಿದ್ದ ಎಂಟು ಮಂದಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ದುರಂತ ನಡೆದ ಗ್ರಾಮವು ಜಿಲ್ಲಾ ಕೇಂದ್ರ ಛಾಪ್ರಾದಿಂದ ಸುಮಾರು 30 ಕಿಮೀ ದೂರದಲ್ಲಿದೆ.

ಸ್ಫೋಟದಿಂದಾಗಿ ಮನೆ ಕುಸಿದು ಆರು ಮಂದಿ ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಸ್ಫೋಟದ ಹಿಂದಿನ ಕಾರಣವನ್ನು ನಾವು ತನಿಖೆ ಮಾಡುತ್ತಿದ್ದೇವೆ. ಫೋರೆನ್ಸಿಕ್ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸಹ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ಸರನ್ ಎಸ್ಪಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ ಸ್ಫೋಟ ಸಂಭವಿಸಿದ ಮನೆಯೊಳಗೆ ಪಟಾಕಿಗಳನ್ನು ತಯಾರಿಸಿ ಸಂಗ್ರಹಿಸಿಡಲಾಗಿತ್ತು. ಒಂದು ಗಂಟೆಗಳ ಕಾಲ ನಿರಂತರವಾಗಿ ಸ್ಫೋಟ ಸಂಭವಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.