ಲಾಕ್‌ಡೌನ್ ಉಲ್ಲಂಘಿಸಿದ ವಲಸೆ ಕಾರ್ಮಿಕರ ವಿರುದ್ಧದ ಕೇಸ್ ಹಿಂಪಡೆಯಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅಸ್ತು
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 64 ವಲಸೆ ಕಾರ್ಮಿಕರ ವಿರುದ್ಧ ದಾಖಲಾಗಿದ್ದ 15 ಪ್ರಕರಣಗಳನ್ನು ಹಿಂಪಡೆಯಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು...

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 64 ವಲಸೆ ಕಾರ್ಮಿಕರ ವಿರುದ್ಧ ದಾಖಲಾಗಿದ್ದ 15 ಪ್ರಕರಣಗಳನ್ನು ಹಿಂಪಡೆಯಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಅನುಮೋದನೆ ನೀಡಿದ್ದಾರೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ.
ಈ ಪ್ರಕರಣಗಳನ್ನು ದೆಹಲಿ ಸರ್ಕಾರದ ಪ್ರಾಸಿಕ್ಯೂಷನ್ ನಿರ್ದೇಶನಾಲಯ ದಾಖಲಿಸಿದೆ ಎಂದು ಪ್ರಕಟಣೆ ಹೇಳಿದೆ.
ಪ್ರಕಟಣೆಯ ಪ್ರಕಾರ, ಸಕ್ಸೇನಾ ಅವರು 100ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಒಳಗೊಂಡಿರುವ ಇದೇ ರೀತಿಯ 10 ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ವರದಿ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದ್ದಾರೆ.
ಬಡ ವಲಸಿಗರು ಮಾಡಿದ ಈ ಉಲ್ಲಂಘನೆಗಳು ಮೂಲಭೂತವಾಗಿ ಕ್ಷುಲ್ಲಕ ಮತ್ತು ತೀವ್ರ ಸಂಕಟದ ಪರಿಸ್ಥಿತಿಯಲ್ಲಿವೆ. ಮಾನವೀಯ ಮತ್ತು ತಾರ್ಕಿಕ ದೃಷ್ಟಿಕೋನದಿಂದ ಸಕ್ಸೇನಾ ಅವರು ಈ ನಿರ್ಧಾರ ತೆಗೆದುಕೊಂಡಿದ್ದು, ಇದರಿಂದ ಕಾರ್ಮಿಕರು "ಅನಗತ್ಯ ಕಿರುಕುಳ ಮತ್ತು ಓಡಾಟದಿಂದ" ತಪ್ಪಿಸಿಕೊಳ್ಳಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


