ಪ್ರತಿಪಕ್ಷಗಳು ದೇಶಕ್ಕಿಂತಲೂ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ: ಪ್ರಧಾನಿ ಮೋದಿ
ಪ್ರತಿಪಕ್ಷಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದು, ಸಮಾಜ ಮತ್ತು ದೇಶಕ್ಕಿಂತಲೂ ಹೆಚ್ಚಾಗಿ ತಮ್ಮ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಕಾನ್ಫುರ: ಪ್ರತಿಪಕ್ಷಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದು, ಸಮಾಜ ಮತ್ತು ದೇಶಕ್ಕಿಂತಲೂ ಹೆಚ್ಚಾಗಿ ತಮ್ಮ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಸಮಾಜವಾದಿ ಪಕ್ಷದ ಮಾಜಿ ರಾಜ್ಯಸಭಾ ಸದಸ್ಯ ಹರ್ ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ವರ್ಚುಯಲ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ತಾವು ಅಧಿಕಾರದಲ್ಲಿದ್ದಾಗ ತೆಗೆದುಕೊಂಡ ನಿರ್ಧಾರಗಳನ್ನು ಅನುಷ್ಠಾನಗೊಳಿಸದ ಪ್ರತಿಪಕ್ಷಗಳು, ಅನೇಕ ಸಂದರ್ಭಗಳಲ್ಲಿ ಸರ್ಕಾರದ ಕೆಲಸಗಳಿಗೆ ಅಡ್ಡಿಪಡಿಸುತ್ತಿವೆ ಎಂದರು.
ಇದೀಗ ಒಂದು ವೇಳೆ ಅವರ ಯೋಜನೆಗಳನ್ನು ಅನುಷ್ಠಾನಗೊಳಿಸಿದರೆ ಅವರು ವಿರೋಧಿಸುತ್ತಾರಾ ಎಂದು ಕೇಳಿದ ಪ್ರಧಾನಿ, ದೇಶದ ಜನರು ಇದನ್ನು ಇಷ್ಟಪಡುವುದಿಲ್ಲ ಎಂದರು.
ಪಕ್ಷಕ್ಕಿಂತಲೂ ದೇಶ ಮೊದಲು ಎಂಬ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾತನ್ನು ನೆನಪಿಸಿಕೊಂಡ ಮೋದಿ, ಪ್ರಜಾಪ್ರಭುತ್ವದಿಂದ ಪಕ್ಷಗಳು ಅಸ್ವಿತ್ವದಲ್ಲಿವೆ, ದೇಶ ಇರುವುದರಿಂದ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ. ನಮ್ಮ ದೇಶದ ಬಹುತೇಕ ಪಕ್ಷಗಳು ವಿಶೇಷವಾಗಿ ಕಾಂಗ್ರೆಸ್ ಯೇತರ ಎಲ್ಲಾ ಪಕ್ಷಗಳು ಈ ಐಡಿಯಾವನ್ನು ಪಾಲಿಸಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


