ದೇಶ

ಟಿಎಂಸಿಯ 38 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಮಿಥುನ್ ಚಕ್ರವರ್ತಿ

38 ತೃಣಮೂಲ ಕಾಂಗ್ರೆಸ್ ಶಾಸಕರು ತಮ್ಮ ಪಕ್ಷದೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಇಂದು ಅಚ್ಚರಿ ಹೇಳಿಕೆ ಹೇಳಿದ್ದಾರೆ.

ಟಿಎಂಸಿಯ 38 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಮಿಥುನ್ ಚಕ್ರವರ್ತಿ
ಮಿಥುನ್ ಚಕ್ರವರ್ತಿ
Published On :

ಕೊಲ್ಕತ್ತ: 38 ತೃಣಮೂಲ ಕಾಂಗ್ರೆಸ್ ಶಾಸಕರು ತಮ್ಮ ಪಕ್ಷದೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಇಂದು ಅಚ್ಚರಿ ಹೇಳಿಕೆ ಹೇಳಿದ್ದಾರೆ. 

38 ಮಂದಿಯಲ್ಲಿ  21 ಮಂದಿ ನೇರ ಸಂಪರ್ಕದಲ್ಲಿದ್ದಾರೆ ಎಂದು ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ಕೋಲ್ಕತ್ತದಲ್ಲಿ ಹೇಳಿದ್ದಾರೆ.

'ನೀವು ಬ್ರೇಕಿಂಗ್ ನ್ಯೂಸ್ ಕೇಳಲು ಬಯಸುವಿರಾ? ಈ ಕ್ಷಣದಲ್ಲಿ, 38 ಟಿಎಂಸಿ ಶಾಸಕರು ನಮ್ಮೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ, ಅವರಲ್ಲಿ 21 ಮಂದಿ ನಮ್ಮೊಂದಿಗೆ ನೇರಸಂಪರ್ಕದಲ್ಲಿದ್ದಾರೆ ಎಂದು ಮಿಥುನ್ ಚಕ್ರವರ್ತಿ ಹೇಳಿದರು. ಈ ಮೂಲಕ ಮಿಥುನ್ ಚಕ್ರವರ್ತಿ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಾಕ್ ಕೊಟ್ಟಿದ್ದಾರೆ.

ಈಗಾಗಲೇ ಮಹಾರಾಷ್ಟ್ರದಲ್ಲಿ ಶಿವಸೇನೆಯ ಶಿಂಧೆ ಬಣ ಬಿಜೆಪಿ ಜೊತೆ ಸೇರಿ ಉದ್ಧವ್ ಠಾಕ್ರೆಯನ್ನು ಕೆಳಗಿಳಿಸಿ ಹೊಸ ಸರ್ಕಾರ ರಚಿಸಿದೆ. ಈ ಹೊತ್ತಲ್ಲಿ ಬಿಜೆಪಿಯ ಮಿಥುನ್ ಚಕ್ರವರ್ತಿ ಹೇಳಿಕೆ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸಿದೆ. ಟಿಎಂಸಿಗಂತೂ ದಿಗಿಲು ಬಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.