ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಶಾಸಕನ ಪುತ್ರ ಸೇರಿ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು
ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಬಾಲಾ ನ್ಯಾಯ ಮಂಡಳಿ ಬುಧವಾರ ಜಾಮೀನು ಮಂಜೂರು ಮಾಡಿದೆ.

ಹೈದರಾಬಾದ್: ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಬಾಲಾ ನ್ಯಾಯ ಮಂಡಳಿ ಬುಧವಾರ ಜಾಮೀನು ಮಂಜೂರು ಮಾಡಿದೆ.
ಜೂನ್ ಮೊದಲ ವಾರದಿಂದ ಬಾಲಾಗೃಹದಲ್ಲಿರುವ ಶಾಸಕನ ಪುತ್ರ ಸೇರಿ ನಾಲ್ವರಿಗೆ ಜಾಮೀನು ನೀಡಲಾಗಿದೆ. ಜಾಮೀನಿನ ಮೇಲೆ ಹೊರ ಬಂದಿರುವ ಅಪ್ರಾಪ್ತರು ಪ್ರತಿ ತಿಂಗಳ ಮೊದಲ ಸೋಮವಾರ ಜಿಲ್ಲಾ ಪರೀಕ್ಷಾಧಿಕಾರಿಗಳ ಮುಂದೆ ಹಾಜರು ಇರಬೇಕು ಎಂದು ತನಿಖಾ ಅಧಿಕಾರಿಗಳಿಗೆ ಷರತ್ತು ವಿಧಿಸಿದೆ.
ಈ ಪ್ರಕರಣದಲ್ಲಿ ಬಂಧಿತರಾಗಿರುವ ಐದನೇ ಅಪ್ರಾಪ್ತ ಜಾಮೀನು ಸಂಬಂಧ ತೆಲಂಗಾಣ ಹೈಕೋರ್ಟ್‌ಗೆ ಮೊರೆ ಹೋಗಿರುವುದರಿಂದ ಬಾಲಾಪರಾಧಿ ಗೃಹದಲ್ಲಿಯೇ ಇರಲಿದ್ದಾನೆ ಮತ್ತು ಏಕೈಕ ವಯಸ್ಕ ಆರೋಪಿ ಸದುದ್ದೀನ್ ಮಲ್ಲಿಕ್ ಜೈಲಿನಲ್ಲಿರಲಿದ್ದಾನೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 28 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಕಾರಿನಲ್ಲಿ 17 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿತ್ತು. ರಾಜಕೀಯವಾಗಿ ಪ್ರಭಾವಿತರ ಮಕ್ಕಳಾದ 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಪಬ್ ನಲ್ಲಿ ಪಾರ್ಟಿ ಮುಗಿಸಿ ಐವರು ಯುವಕರೊಂದಿಗೆ ಕಾರಿನಲ್ಲಿ ಬಂದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


