ದೆಹಲಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಂಕಿಪಾಕ್ಸ್ ಸೋಂಕು ಶಂಕಿತ ವಿದೇಶ ಪ್ರಯಾಣ ಮಾಡಿದ್ದ!
ನವದೆಹಲಿಯ ಎಲ್ಎನ್ ಜೆಪಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಂಕಿಪಾಕ್ಸ್ ಶಂಕಿತ ರೋಗಿ ಒಂದು ತಿಂಗಳ ಹಿಂದೆ ವಿದೇಶಕ್ಕೆ ಪ್ರಯಾಣ ಮಾಡಿದ್ದರು ಎಂದು ತಿಳಿದುಬಂದಿದೆ.

ನವದೆಹಲಿ: ನವದೆಹಲಿಯ ಎಲ್ಎನ್ ಜೆಪಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಂಕಿಪಾಕ್ಸ್ ಶಂಕಿತ ರೋಗಿ ಒಂದು ತಿಂಗಳ ಹಿಂದೆ ವಿದೇಶಕ್ಕೆ ಪ್ರಯಾಣ ಮಾಡಿದ್ದರು ಎಂದು ತಿಳಿದುಬಂದಿದೆ.
ಘಾಜಿಯಾಬಾದ್ ನ ನಿವಾಸಿಯಾಗಿರುವ ವ್ಯಕ್ತಿಯ ಮಾದರಿಗಳ ವರದಿಗಳು ಪುಣೆಯ ರಾಷ್ಟ್ರೀಯ ವೈರಾಲಜಿ ಇನ್ಸ್ಟಿಟ್ಯೂಟ್ ನಿಂದ ಇನ್ನಷ್ಟೇ ಬರಬೇಕಿದ್ದು, ವ್ಯಕ್ತಿಗೆ ಜ್ವರ ಹಾಗೂ ಗಾಯಗಳು ಉಂಟಾಗಿತ್ತು. ಮಂಗಳವಾರ ಮಧ್ಯಾಹ್ನ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಐಸೊಲೇಷನ್ ನಲ್ಲಿರಿಸಿದ್ದಾರೆ.
ಕೇರಳದ್ಲಲಿ ಮೂರು ಸೇರಿ ದೇಶದಲ್ಲಿ ಒಟ್ಟಾರೆ 4 ಪ್ರಕರಣಗಳು ಪತ್ತೆಯಾಗಿದೆ. ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣದ ವ್ಯಕ್ತಿ ಎಲ್ ಎನ್ ಜೆಪಿ ಆಸ್ಪತ್ರೆಯ ಐಸೊಲೇಷನ್ ನಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಆತನ ಸ್ಥಿತಿ ಸ್ಥಿರವಾಗಿದ್ದು, ಗಾಯಗಳು ಸಂಪೂರ್ಣವಾಗಿ ವಾಸಿಯಾದ ಬಳಿಕ ಆತನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


