ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದು
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.
ಕೇಜ್ರಿವಾಲ್ ಅವರ ವಿದೇಶ ಪ್ರವಾಸ ರದ್ಧತಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ದೆಹಲಿ ಸರ್ಕಾರ ಔಪಚಾರಿಕ ಹೇಳಿಕೆ ನೀಡಿದೆ. ಆಗಸ್ಟ್ ಮೊದಲ ವಾರದಲ್ಲಿ ಸಿಂಗಾಪುರದಲ್ಲಿ ನಡೆಯಲಿರುವ ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾಗವಹಿಸಲು ಕೇಜ್ರಿವಾಲ್ ಅವರನ್ನು ಆಹ್ವಾನಿಸಲಾಗಿತ್ತು.
ಜುಲೈ 20 ರೊಳಗೆ ಸಿಂಗಾಪುರ್ ಭೇಟಿಯ ಔಪಚಾರಿಕ ಕಾರ್ಯಗಳು ಪೂರ್ಣಗೊಂಡಿದ್ದು, ಜುಲೈ 21 ರಂದು ಲೆಫ್ಟಿನೆಂಟ್ ಗವರ್ನರ್ ಕಡತವನ್ನು ಹಿಂದಿರುಗಿಸಿದ್ದಾರೆ. ಎಲ್‌ಜಿ ಮತ್ತು ಕೇಂದ್ರದಿಂದ ಅಗತ್ಯ ಅನುಮತಿ ಪಡೆಯಲು ಬಹಳ ಸಮಯ ತೆಗೆದುಕೊಂಡಿದ್ದರಿಂದ, ಉಳಿದ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಸಮಯ ಆಗಿಲ್ಲ ಎಂದು ಎಎಪಿ ಹೇಳಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


