ಕೆಲಸಕ್ಕಿದ್ದ ಮನೆಯಲ್ಲಿ ಕನ್ನ: 10 ಕೋಟಿ ರೂ. ದರೋಡೆ ಮಾಡಿದ್ದ ಆರೋಪಿ ಬಂಧನ
ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಮನೆಕೆಲಸದಾತ ತಾನು ಕೆಲಸ ಮಾಡುತ್ತಿದ್ದ ಮನೆಯಿಂದ 8 ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಕದ್ದಿದ್ದಾನೆ.

ನವದೆಹಲಿ: ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಮನೆಕೆಲಸದಾತ ತಾನು ಕೆಲಸ ಮಾಡುತ್ತಿದ್ದ ಮನೆಯಿಂದ 8 ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಕದ್ದಿದ್ದಾನೆ. ಕಳ್ಳತನದ ಆರೋಪದ ಮೇಲೆ ಪೊಲೀಸರು ಮನೆಗೆಲಸದಾತ ಮತ್ತು ಆತನ ಸಂಬಂಧಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಬಿಹಾರ ನಿವಾಸಿ ಮೋಹನ್ ಕುಮಾರ್ (26) ಎಂದು ಗುರುತಿಸಲಾಗಿದೆ. ವಯಸ್ಸು ದೃಢೀಕರಣದ ಅವಶ್ಯಕತೆಗಳ ಕಾರಣದಿಂದಾಗಿ ಕುಮಾರ್ ಅವರ ಸಂಬಂಧಿಯನ್ನು ಬಾಲ ನ್ಯಾಯ ಮಂಡಳಿ (ಜೆಜೆಬಿ) ಮನೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಜುಲೈ 4 ರಂದು ಮನೆಯ ಯಜಮಾನ ತಮ್ಮ ಕುಟುಂಬ ಸದಸ್ಯರೊಂದಿಗೆ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುಎಸ್‌ಗೆ ತೆರಳಿದ್ದರು . ಕಳೆದ ಐದು ವರ್ಷಗಳಿಂದ ಸೇವಕನಾಗಿ ಕೆಲಸ ಮಾಡುತ್ತಿದ್ದ ಕುಮಾರ್ ಗೆ ಮನೆಯೊಡೆಯ ಮನೆಯ ಕೀಲಿಕೈಗಳನ್ನು ನೀಡಿದ್ದರು. ಆದರೆ ಜುಲೈ 18 ರಂದು ಕುಮಾರ್ ಮನೆಯಲ್ಲಿ ಕಳ್ಳತನ ಮಾಡಿ ಸುಮಾರು 8-10 ಕೋಟಿ ರೂ. ಮೌಲ್ಯದ ಕಾರು, ನಗದು ಮತ್ತು ಚಿನ್ನಾಭರಣಗಳನ್ನು ಕಳವು ಮಾಡಿದ್ದ.
ತನಿಖೆ ವೇಳೆ ಪೊಲೀಸರು ಆ ಪ್ರದೇಶದಲ್ಲಿನ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಆರೋಪಿಯು ಕಾರಿನಲ್ಲಿ ಸೂಟ್‌ಕೇಸ್ ಸಾಗಿಸುತ್ತಿರುವುದು ಕಂಡು ಬಂದಿದೆ.ಬಂಧಿತರಿಂದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ 5,04,900 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಉಳಿದ ಚಿನ್ನಾಭರಣ ಹಾಗೂ ನಗದನ್ನು ಪತ್ತೆ ಹಚ್ಚುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


