ಕೇರಳ: ದೇಶದ ಮೊದಲ 'ಮಂಕಿಪಾಕ್ಸ್' ರೋಗಿ ಗುಣಮುಖ
ದೇಶದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಕಾಯಿಲೆ ಕಾಣಿಸಿಕೊಂಡು ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ವ್ಯಕ್ತಿಯೋರ್ವರು ಕಾಯಿಲೆಯಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ತಿಳಿಸಿದ್ದಾರೆ.

ತಿರುವನಂತಪುರಂ: ದೇಶದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಕಾಯಿಲೆ ಕಾಣಿಸಿಕೊಂಡು, ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ವ್ಯಕ್ತಿಯೋರ್ವರು ಕಾಯಿಲೆಯಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ತಿಳಿಸಿದ್ದಾರೆ.
ಕೊಲ್ಲಂನಿಂದ ಬಂದಿದ್ದ 35 ವರ್ಷದ ವ್ಯಕ್ತಿಯನ್ನು ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದ್ದರಿಂದ ರಾಷ್ಟ್ರೀಯ ವೈರಾಣು ಸಂಸ್ಥೆ ಸೂಚನೆಯಂತೆ 72 ಗಂಟೆಯಲ್ಲಿ ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಎರಡು ಬಾರಿಯೂ ಎಲ್ಲಾ ಸ್ಯಾಂಪಲ್ ಗಳಲ್ಲಿ ನೆಗೆಟಿವ್ ವರದಿಯಾಗಿದೆ. ರೋಗಿ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಚರ್ಮದ ಮೇಲಿನ ದುದ್ದುಗಳು ಸಂಪೂರ್ಣವಾಗಿ ಗುಣಮುಖವಾಗಿದ್ದು, ಇಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಆತನ ಕುಟುಂಬ ಸದಸ್ಯರ ಸ್ಯಾಂಪಲ್ ಪರೀಕ್ಷೆ ಫಲಿತಾಂಶದಲ್ಲೂ ನೆಗೆಟಿವ್ ವರದಿಯಾಗಿದೆ. ಪ್ರಸ್ತುತ ಪಾಸಿಟಿವ್ ಕಾಣಿಸಿಕೊಂಡಿದ್ದ ಇತರ ಇಬ್ಬರ ಆರೋಗ್ಯವೂ ಸುಧಾರಿಸಿದೆ. ಇದೇ ರೀತಿಯಲ್ಲಿ ರೋಗ ತಡೆ ಕ್ರಮಗಳು ಮುಂದುವರೆಯಲಿವೆ ಎಂದು ಸಚಿವರು ಹೇಳಿದ್ದಾರೆ. ವಿದೇಶದಿಂದ ಕೇರಳಕ್ಕೆ ಮರಳಿದ್ದ ಕೊಲ್ಲಂ ನಿವಾಸಿಗೆ ಜುಲೈ 14 ರಂದು ಮಂಕಿಪಾಕ್ಸ್ ಲಕ್ಷಣಗಳು ಹಾಗೂ ಪಾಸಿಟಿವ್ ಕಂಡುಬಂದ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


