ಬಾರಾಮುಲ್ಲಾದಲ್ಲಿ ಮತ್ತೆ ಸೇನಾ ಎನ್‌ಕೌಂಟರ್: ಓರ್ವ ಭಯೋತ್ಪಾದಕ ಹತ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬಿನ್ನರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಇ ತೊಯ್ಬಾದ (ಎಲ್ಇಟಿ) ಭಯೋತ್ಪಾದಕ ಹತನಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬಿನ್ನರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಇ ತೊಯ್ಬಾದ (ಎಲ್ಇಟಿ) ಭಯೋತ್ಪಾದಕ ಹತನಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಹತ್ಯೆಗೀಡಾದ ಉಗ್ರನನ್ನು ಇರ್ಷಾದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಎಲ್ಇಟಿಯೊಂದಿಗೆ ಸಂಪರ್ಕ ಹೊಂದಿದ್ದ ಈತ ಮೇ 2022 ರಿಂದ ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಎನ್ನಲಾಗಿದೆ.
ಪೊಲೀಸರು ಆತನಿಂದ ಒಂದು ಎಕೆ ರೈಫಲ್, ಎರಡು ಮ್ಯಾಗಜೀನ್‌ಗಳು ಮತ್ತು 30 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರ ತಡರಾತ್ರಿ ಈ ಎನ್‌ಕೌಂಟರ್ ನಡೆದಿದೆ.
ಇದಕ್ಕೂ ಮುನ್ನ, ಶನಿವಾರ ಮುಂಜಾನೆಯಷ್ಟೇ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಾರಾಮುಲ್ಲಾದ ವಾನಿಗಮ್ ಬಾಲಾ ಗ್ರಾಮದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದರು.
ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಒಂದು ಶ್ವಾನವೂ ಕೂಡ ಪ್ರಾಣ ಕಳೆದುಕೊಂಡಿದ್ದು, ಭದ್ರತಾ ಪಡೆಗಳ ಮೂವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನೊಂದೆಡೆ, ಎಲ್ಇಟಿಯ ಇಬ್ಬರು ಹೈಬ್ರಿಡ್ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


