ದೆಹಲಿಯ ಕರೋಲ್ ಬಾಗ್ ಶೂ ಮಾರುಕಟ್ಟೆಯಲ್ಲಿ ಬೆಳ್ಳಂಬೆಳಗ್ಗೆ ಹತ್ತಿಕೊಂಡ ಬೆಂಕಿ: ನಂದಿಸಲು 39 ಅಗ್ನಿಶಾಮಕ ಟೆಂಡರ್
ಮಧ್ಯ ದೆಹಲಿಯ ಕರೋಲ್ ಬಾಗ್ ಪ್ರದೇಶದ ಶೂ ಮಾರುಕಟ್ಟೆಯಲ್ಲಿ ಭಾನುವಾರ ಮುಂಜಾನೆ ಹಲವು ಅಂಗಡಿಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗೆ ನಂದಿಸಲು ಸುಮಾರು ಐದು ಗಂಟೆ ಹಿಡಿಯಿತು ಎಂದು ಅಗ್ನಿಶಾಮಕ ಸೇವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಮಧ್ಯ ದೆಹಲಿಯ ಕರೋಲ್ ಬಾಗ್ ಪ್ರದೇಶದ ಶೂ ಮಾರುಕಟ್ಟೆಯಲ್ಲಿ ಭಾನುವಾರ ಮುಂಜಾನೆ ಹಲವು ಅಂಗಡಿಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗೆ ನಂದಿಸಲು ಸುಮಾರು ಐದು ಗಂಟೆ ಹಿಡಿಯಿತು ಎಂದು ಅಗ್ನಿಶಾಮಕ ಸೇವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿ ನಂದಿಸುವ ಕಾರ್ಯಾಚರಣೆಗಳು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಬೆಂಕಿಯನ್ನು ನಂದಿಸಲಾಯಿತು ಎಂದು ಅವರು ಹೇಳಿದರು. ನಸುಕಿನ ಜಾವ 4.16 ಕ್ಕೆ ಕರೋಲ್ ಬಾಗ್‌ನ ಗಫಾರ್‌ನಲ್ಲಿರುವ ಶೂ ಮಾರುಕಟ್ಟೆಯಲ್ಲಿ ಬೆಂಕಿ ಹತ್ತಿ ಉರಿಯುತ್ತಿರುವ ಕರೆ ಬಂತು. 39 ಅಗ್ನಿಶಾಮಕ ಟೆಂಡರ್ ಗಳು ಸ್ಥಳಕ್ಕೆ ಧಾವಿಸಿದವು ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.
ಘಟನೆಯಲ್ಲಿ ಯಾರೂ ಸಿಕ್ಕಿಹಾಕಿಕೊಂಡಿಲ್ಲ ಮತ್ತು ಯಾರಿಗೂ ಗಾಯಗಳಾಗಿಲ್ಲ, ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದರು. ಬೆಂಕಿ ಹೊತ್ತಿಕೊಂಡ ಯಾವುದೇ ಅಂಗಡಿಗಳು ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಹೊಂದಿಲ್ಲ ಎಂದು ಡಿಎಫ್‌ಎಸ್ ನಿರ್ದೇಶಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


