ವಾಯುವ್ಯ ಭಾರತದಲ್ಲಿ ಜೂ.13 ವರೆಗೆ ಉಷ್ಣ ಹವೆ: ಐಎಂಡಿ
ವಾಯುವ್ಯ ಹಾಗೂ ಮಧ್ಯ ಭಾರತದಲ್ಲಿ ಉಷ್ಣಹವೆಯ ಪರಿಣಾಮ ಸ್ವಲ್ಪ ಮಟ್ಟಿಗೆ ತಗ್ಗಿದ್ದು, ಜೂ.13 ವರೆಗೂ ಉಷ್ಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನವದೆಹಲಿ: ವಾಯುವ್ಯ ಹಾಗೂ ಮಧ್ಯ ಭಾರತದಲ್ಲಿ ಉಷ್ಣಹವೆಯ ಪರಿಣಾಮ ಸ್ವಲ್ಪ ಮಟ್ಟಿಗೆ ತಗ್ಗಿದ್ದು, ಜೂ.13 ವರೆಗೂ ಉಷ್ಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪಂಜಾಬ್, ಹರ್ಯಾಣ, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ್, ಹಿಮಾಚಲ ಪ್ರದೇಶ, ಬಿಹಾರ ಹಾಗೂ ಜಾರ್ಖಂಡ್ ಗಳಲ್ಲಿ ಉಷ್ಣ ಹವೆ ಇನ್ನೂ 2 ದಿನಗಳಿಗೂ ಅಧಿಕ ಸಮಯ ಇರಲಿದೆ.
ಶನಿವಾರದಂದು ಉಷ್ಣ ಹವೆ ದೇಶದ ಹಲವು ಭಾಗಗಳಲ್ಲಿದ್ದ ಪರಿಣಾಮ ರಾಜಸ್ಥಾನ, ಮಧ್ಯಪ್ರದೇಶ, ಹರ್ಯಾಣ, ದೆಹಲಿ, ಜಾರ್ಖಂಡ್, ಉತ್ತರ ಪ್ರದೇಶಗಳಲ್ಲಿ ಉಷ್ಣ ಹವೆ ಇತ್ತು ಈ ಪೈಕಿ ಬಾಂದಾದಲ್ಲಿ ಅತಿ ಹೆಚ್ಚು ಅಂದರೆ 46.2 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ದಾಖಲಾಗಿತ್ತು.
ಈ ರಾಜ್ಯಗಳ 22 ನಗರಗಳು, ಪಟ್ಟಣಗಳಲ್ಲಿ 44 ಕ್ಕಿಂತ ಅಧಿಕ ಡಿಗ್ರಿ ಉಷ್ಣಾಂಶ ದಾಖಲಾಗಿತ್ತು. ಜೂ.02 ರಿಂದ ವಾಯುವ್ಯ ಭಾರತ ಹಾಗೂ ಮಧ್ಯ ಭಾರತದಲ್ಲಿ ತೀವ್ರವಾದ ಉಷ್ಣಾಂಶ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


