ದೇಶ

ರಾಷ್ಟ್ರಪತಿ ಚುನಾವಣೆಗೆ ಲಾಲು ಪ್ರಸಾದ್ ಯಾದವ್ ಸ್ಪರ್ಧೆ, ನಾಮಪತ್ರ ಸಲ್ಲಿಕೆಗೆ ಸಿದ್ಧತೆ

ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಹಾರಿಯೊಬ್ಬರು ಸ್ಪರ್ಧಿಸಬೇಕೆಂಬ ನಂಬಿಕೆಯಿಂದ ಲಾಲು ಪ್ರಸಾದ್ ಯಾದವ್ ಸ್ಪರ್ಧಿಸಲು ಯೋಚಿಸಿದ್ದಾರೆ. ಆದರೆ, ಇವರು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅಲ್ಲ.

ರಾಷ್ಟ್ರಪತಿ ಚುನಾವಣೆಗೆ ಲಾಲು ಪ್ರಸಾದ್ ಯಾದವ್ ಸ್ಪರ್ಧೆ, ನಾಮಪತ್ರ ಸಲ್ಲಿಕೆಗೆ ಸಿದ್ಧತೆ
ಪಾರ್ಲಿಮೆಂಟ್
Published On :

ಪಾಟ್ನಾ: ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಹಾರಿಯೊಬ್ಬರು ಸ್ಪರ್ಧಿಸಬೇಕೆಂಬ ನಂಬಿಕೆಯಿಂದ ಲಾಲು ಪ್ರಸಾದ್ ಯಾದವ್ ಸ್ಪರ್ಧಿಸಲು ಯೋಚಿಸಿದ್ದಾರೆ. ಆದರೆ, ಇವರು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅಲ್ಲ. 

ಸರನ್ ಜಿಲ್ಲೆಯ ನಿವಾಸಿಯಾದ ಲಾಲು ಪ್ರಸಾದ್ ಯಾದವ್ ಅವರು, ಜೂನ್ 15 ರಂದು ನಾಮಪತ್ರ ಸಲ್ಲಿಸಲು ತಯಾರಿ ನಡೆಸಿದ್ದಾರೆ. ಈಗಾಗಲೇ ಅವರು ದೆಹಲಿಗೆ ಟಿಕೆಟ್ ವಿಮಾನ ಕಾಯ್ದಿರಿಸಿದ್ದಾರೆ ಎನ್ನಲಾಗಿದೆ. ಇವರು 2017ರಲ್ಲಿಯೂ ನಾಮಪತ್ರ ಸಲ್ಲಿಸಿದ್ದರು. ಬಿಹಾರ ರಾಜ್ಯಪಾಲರಾಗಿದ್ದ ರಾಮ್ ನಾಥ್ ಕೋವಿಂದ್ ಹಾಗೂ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ನಡುವೆ ಆಗ ಸ್ಪರ್ಧೆ ಏರ್ಪಟ್ಟಿತ್ತು.

ಕಳೆದ ಬಾರಿ ಸಾಕಷ್ಟು ಸಂಖ್ಯೆಯಲ್ಲಿ ಸೂಚಕರಿಲ್ಲದ ಕಾರಣ ನಾಮಪತ್ರ ತಿರಸ್ಕೃತಗೊಂಡಿತ್ತು. ಈ ಬಾರಿ ಉತ್ತಮ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ತನಗೆ ಏಳು ಮಕ್ಕಳಿದ್ದು, ಜೀವನೋಪಾಯಕ್ಕಾಗಿ ವ್ಯವಸಾಯ ಮಾಡುತ್ತೇನೆ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದಾಗಿ ಯಾದವ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.