ಪಶ್ಚಿಮ ಬಂಗಾಳದ ಸರ್ಕಾರಿ ವಿವಿಗಳಿಗೆ ರಾಜ್ಯಪಾಲರ ಬದಲು ಸಿಎಂ ಕುಲಪತಿ, ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ
ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳನ್ನು ಕುಲಪತಿಯನ್ನಾಗಿ ನೇಮಕ ಮಾಡುವ ಮಸೂದೆಯನ್ನು ಸೋಮವಾರ ಪಶ್ಚಿಮ ಬಂಗಾಳ....

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳನ್ನು ಕುಲಪತಿಯನ್ನಾಗಿ ನೇಮಕ ಮಾಡುವ ಮಸೂದೆಯನ್ನು ಸೋಮವಾರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಮಸೂದೆಯ ವಿರುದ್ಧ ಬಿಜೆಪಿ ಶಾಸಕರು ಪ್ರತಿಭಟಿಸಿದರೂ ಮಸೂದೆ ಪರವಾಗಿ 182 ಮತಗಳು ಹಾಗೂ ವಿರುದ್ಧವಾಗಿ ಕೇವಲ 40 ಮತಗಳು ಚಲಾವಣೆಯಾಗಿವೆ.
ಇಂದು ವಿಧಾನಸಭೆಯಲ್ಲಿ ಪಶ್ಚಿಮ ಬಂಗಾಳ ವಿಶ್ವವಿದ್ಯಾಲಯ ಕಾನೂನು(ತಿದ್ದುಪಡಿ) ಮಸೂದೆ, 2022 ಅನ್ನು ಮಂಡಿಸಿ ಮಾತನಾಡಿದ ರಾಜ್ಯ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರು, ಮುಖ್ಯಮಂತ್ರಿಯವರು ಕುಲಪತಿಯಾಗಿ ಅಧಿಕಾರ ವಹಿಸಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
ಪ್ರಧಾನಮಂತ್ರಿಗಳು ಕೇಂದ್ರೀಯ ವಿಶ್ವವಿದ್ಯಾನಿಲಯ ವಿಶ್ವಭಾರತಿಯ ಕುಲಪತಿಯಾಗಲು ಸಾಧ್ಯವಿದ್ದರೆ , ರಾಜ್ಯದ ವಿಶ್ವವಿದ್ಯಾನಿಲಯಗಳ ಕುಲಪತಿಯಾಗಲು ಮುಖ್ಯಮಂತ್ರಿಗೆ ಏಕೆ ಸಾಧ್ಯವಿಲ್ಲ? ಎಂದು ಶಿಕ್ಷಣ ಸಚಿವರು ಪ್ರಶ್ನಿಸಿದರು.
ಪ್ರಸ್ತುತ ವಿವಿಗಳ ಕುಲಪತಿಯಾಗಿರುವ ರಾಜ್ಯಪಾಲ ಜಗದೀಪ್ ಧನಕರ್ ಅವರು ವಿವಿಧ ಸಂದರ್ಭಗಳಲ್ಲಿ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಚಿವ ಬ್ರಾತ್ಯ ಬಸು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


