ನ್ಯಾಷನಲ್ ಹೆರಾಲ್ಡ್ ಕೇಸ್: ಸತತ 2.5 ಗಂಟೆ ರಾಹುಲ್ ಗಾಂಧಿ ವಿಚಾರಣೆ; ಭೋಜನ ವಿರಾಮದ ಬಳಿಕ ಮುಂದುವರಿಕೆ!
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಗಳು ಸತತ 2.5 ಗಂಟೆ ವಿಚಾರಣೆ ಮಾಡಿದ್ದು, ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಮತ್ತೆ ವಿಚಾರಣೆ ಮುಂದುವರೆದಿದೆ ಎನ್ನಲಾಗಿದೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಗಳು ಸತತ 2.5 ಗಂಟೆ ವಿಚಾರಣೆ ಮಾಡಿದ್ದು, ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಮತ್ತೆ ವಿಚಾರಣೆ ಮುಂದುವರೆದಿದೆ ಎನ್ನಲಾಗಿದೆ.
ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಬೆಂಬಲಿಗರೊಂದಿಗೆ ಆಗಮಿಸಿದ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ಹೋಗಿ ವಿಚಾರಣೆಗೆ ಹಾಜರಾರದರು. ಸುಮಾರು ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಮಧ್ಯಾಹ್ನ 2:10ರ ಸುಮಾರಿಗೆ ಊಟಕ್ಕೆ ತೆರಳಲು ಅವರಿಗೆ ಅವಕಾಶ ನೀಡಲಾಯಿತು ಎಂದು ಅವರು ತಿಳಿಸಿದ್ದಾರೆ.
51ರ ಹರೆಯದ ಗಾಂಧಿ ಅವರು ಮತ್ತೆ ವಿಚಾರಣೆಗೆ ಹಾಜರಾಗುವ ನಿರೀಕ್ಷೆಯಿದ್ದು, ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತಮ್ಮ ಹೇಳಿಕೆಯ ರೆಕಾರ್ಡಿಂಗ್ ಅನ್ನು ಪುನರಾರಂಭಿಸಲಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಯಂಗ್ ಇಂಡಿಯನ್ ಪಕ್ಷದ ಪ್ರಚಾರದಲ್ಲಿ ಹಣಕಾಸು ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


