ದೇಶ

ರಾಹುಲ್ ಎಲ್ಲಾ ಆರೋಪಗಳಿಂದ ದೋಷಮುಕ್ತರಾಗಲಿದ್ದಾರೆ: ರಾಬರ್ಟ್ ವಾದ್ರಾ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಮುಂದೆ ವಿಚಾರಣೆ ಎದುರಿಸುತ್ತಿರುವ ರಾಹುಲ್ ಗಾಂಧಿ, ಎಲ್ಲಾ ಆರೋಪಗಳಿಂದ ದೋಷಮುಕ್ತರಾಗಲಿದ್ದಾರೆ ಎಂದು ಅವರ ಮಾವ ರಾಬರ್ಟ್ ವಾದ್ರಾ ಹೇಳಿದ್ದಾರೆ.

ರಾಹುಲ್ ಎಲ್ಲಾ ಆರೋಪಗಳಿಂದ ದೋಷಮುಕ್ತರಾಗಲಿದ್ದಾರೆ: ರಾಬರ್ಟ್ ವಾದ್ರಾ
ರಾಬರ್ಟ್ ವಾದ್ರಾ
Published On :

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಮುಂದೆ ವಿಚಾರಣೆ ಎದುರಿಸುತ್ತಿರುವ ರಾಹುಲ್ ಗಾಂಧಿ, ಎಲ್ಲಾ ಆರೋಪಗಳಿಂದ ದೋಷಮುಕ್ತರಾಗಲಿದ್ದಾರೆ ಎಂದು ಅವರ ಮಾವ ರಾಬರ್ಟ್ ವಾದ್ರಾ ಹೇಳಿದ್ದಾರೆ. ತನ್ನ ಸ್ವಂತ ಕೇಸ್ ಗಳನ್ನು ಉಲ್ಲೇಖಿಸಿರುವ ವಾದ್ರಾ, ಹೇಗೆ ತನಗೆ 15 ಬಾರಿ ಸಮನ್ಸ್ ನೀಡಿ, ವಿಚಾರಣೆ ನಡೆಸಲಾಯಿತು ಎಂಬುದನ್ನು ತಿಳಿಸಿದ್ದಾರೆ.

ಇಂತಹ ಕಿರುಕುಳ ಪದ್ಧತಿ ಮೂಲಕ ದೇಶದ ಜನರ ಧ್ವನಿಯನ್ನು ಸರ್ಕಾರ ಅಡಗಿಸಲು ಸಾಧ್ಯವಿಲ್ಲ ಎಂದು ರಾಬರ್ಟ್ ವಾದ್ರಾ ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿದ್ದಾರೆ. ರಾಹುಲ್, ನೀವು ನಿಸ್ಸಂದೇಹವಾಗಿ ಎಲ್ಲಾ ಆಧಾರರಹಿತ ಆರೋಪಗಳಿಂದ ಮುಕ್ತರಾಗುತ್ತೀರಿ ಎಂದು ಅವರು ಹೇಳಿದ್ದಾರೆ.

ನನಗೆ 15 ಬಾರಿ ಸಮನ್ಸ್ ನೀಡಿದ್ದರಿಂದ  ಜಾರಿ ನಿರ್ದೇಶನಾಲಯಕ್ಕೆ ಭೇಟಿ ನೀಡಿದ್ದೇನೆ ಮತ್ತು ಪ್ರತಿ ಪ್ರಶ್ನೆಗೆ ಉತ್ತರಿಸಿದ್ದೇನೆ ಮತ್ತು ನಾನು ಇಲ್ಲಿಯವರೆಗೂ ಗಳಿಸಿರುವ ಆದಾಯಕ್ಕೆ ಸಂಬಂಧಿಸಿದಂತೆ 23,000 ದಾಖಲೆಗಳನ್ನು ಸಲ್ಲಿಸಿದ್ದೇನೆ. ಸತ್ಯಾಂಶ ಹೊರಬರಲಿದೆ ಎಂಬ ವಿಶ್ವಾಸವಿದೆ. ಇದು ನಮ್ಮೆಲ್ಲರನ್ನು ಬಲಿಷ್ಠ ವ್ಯಕ್ತಿಗಳನ್ನಾಗಿ ಮಾಡುತ್ತದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.