ಅಕ್ರಮ ಸಂಬಂಧ ಹೊಂದಿದ್ದ ಪತಿ-ಮಹಿಳೆಯ ಬೆತ್ತಲೆ ಮೆರವಣಿಗೆ; ಪತ್ನಿ ಸೇರಿ ನಾಲ್ವರ ಬಂಧನ
ಛತ್ತೀಸ್ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ವಿವಾಹಿತ ಪುರುಷ ಮತ್ತು ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ರಾಯಪುರ: ಛತ್ತೀಸ್ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ವಿವಾಹಿತ ಪುರುಷ ಮತ್ತು ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಜೂನ್ 11 ರಂದು ಊರಿಂದಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಪುರುಷನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಘಟನೆ ಬೆಳಕಿಗೆ ಬಂದ ನಂತರ ತನಿಖೆಗಾಗಿ ಪೊಲೀಸ್ ತಂಡವನ್ನು ಗ್ರಾಮಕ್ಕೆ ಕಳುಹಿಸಲಾಗಿತ್ತು. ತನ್ನ ಪತಿ ಮತ್ತೊಬ್ಬ ಮಹಿಳೆಯ ಜೊತೆ ಇದ್ದುದ್ದನ್ನು ಕಂಡ ಪತ್ನಿ, ತನ್ನ ಸಂಬಂಧಿಕರನ್ನ ಕರೆದು ಬಳಿಕ ಮಹಿಳೆ ಹಾಗೂ ಪತಿ ಇಬ್ಬರನ್ನೂ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತರ ಹೇಳಿಕೆಗಳ ಆಧಾರದ ಮೇಲೆ, ಉರಿಂದಬೇಡ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354 ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಹೆಂಡತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


