ದೇಶ

ಕೋವಿಡ್-19: ಭಾರತದಲ್ಲಿಂದು 6,594 ಹೊಸ ಕೇಸ್ ಪತ್ತೆ, 6 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 6,594 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ

ಕೋವಿಡ್-19: ಭಾರತದಲ್ಲಿಂದು 6,594 ಹೊಸ ಕೇಸ್ ಪತ್ತೆ, 6 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 6,594 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,36,695ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,777ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 50,548ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 4,035ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,61,370ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,49,418 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,51,08,879 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,95,35,70,360 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.