ದೇಶ

ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನಾಳೆ ದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ಕಾಂಗ್ರೆಸ್ ಭಾಗಿ

ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ತಂತ್ರಗಾರಿಕೆ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ದೆಹಲಿಯಲ್ಲಿ ಕರೆದಿರುವ...

ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನಾಳೆ ದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ಕಾಂಗ್ರೆಸ್ ಭಾಗಿ
ಸೋನಿಯಾ ಗಾಂಧಿ, ಮಮತಾ ಬ್ಯಾನರ್ಜಿ
Published On :

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ತಂತ್ರಗಾರಿಕೆ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ದೆಹಲಿಯಲ್ಲಿ ಕರೆದಿರುವ ಪ್ರತಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ.

ತೃಣಮೂಲ ಕಾಂಗ್ರೆಸ್ ನಾಯಕರು ಕರೆದಿರುವ ಸಭೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಕಾಂಗ್ರೆಸ್ ಪ್ರತಿನಿಧಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇಲ್ಲಿಯವರೆಗೆ ಒಮ್ಮತದ ಸಾಧ್ಯತೆಯಂತೆ, ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಅವರು ನಿರೀಕ್ಷಿತ ಅಭ್ಯರ್ಥಿಗಳಲ್ಲಿ ಒಬ್ಬರು ಎಂಬ ಸುಳಿವು ಇತ್ತು. ಆದರೆ ಪವಾರ್ ಅವರು ರಾಷ್ಟ್ರಪತಿ ಚುನಾವಣೆಯ ರೇಸ್ ನಲ್ಲಿ ಇಲ್ಲ ಎಂದು ಅವರ ಪಕ್ಷ ಎನ್ ಸಿಪಿ ಹೇಳಿದೆ. ಶರದ್ ಪವಾರ್ ಬುಧವಾರದ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಮಮತಾ ಬ್ಯಾನರ್ಜಿ ಅವರು ಶನಿವಾರ ಪ್ರತಿಪಕ್ಷ ನಾಯಕರಿಗೆ ಪತ್ರ ಬರೆದು ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದರು.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳುತ್ತದೆ. ಭಾರತದ ಮುಂದಿನ ರಾಷ್ಟ್ರಪತಿಗಾಗಿ ಜುಲೈ 18 ರಂದು ಚುನಾವಣೆ ನಡೆಯಲಿದೆ ಮತ್ತು ಅಗತ್ಯವಿದ್ದರೆ ಮೂರು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟಕ್ಕೆ ಖಚಿತ ಗೆಲುವಿನ ಸಂಖ್ಯೆ ಇಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.