ದೇಶ

ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಒಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಕಣಿವೆ ನಾಡಿನಲ್ಲಿ ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿರುವ ಬೆನ್ನಲ್ಲೇ ಭಯೋತ್ಪಾದಕರ ನಿಗ್ರಹಕ್ಕೆ ಶೋಧ ಕಾರ್ಯಾಚರಣೆ ಹೆಚ್ಚಿಸಲಾಗಿದೆ.

ಜೂನ್‌ 30ರಿಂದ ಆರಂಭವಾಗಲಿರುವ ಅಮರನಾಥ ಯಾತ್ರೆಯನ್ನು ಗುರಿಯಾಗಿಸಿ ದಾಳಿ ನಡೆಸಲು ಈ ಉಗ್ರರು ಸಂಚು ರೂಪಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಮೂವರು ಉಗ್ರರು ಯೋಜನೆ ರೂಪಿಸಿದ್ದರು. ಪಾಕಿಸ್ತಾನದ ಇಬ್ಬರು ಉಗ್ರರು ಹಾಗೂ ಒಬ್ಬ ಸ್ಥಳೀಯ ಉಗ್ರ ಸೇರಿ ರೂಪಿಸಿದ್ದ ಯೋಜನೆಯನ್ನು ವಿಫಲಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.