ತಮಿಳುನಾಡಿನಿಂದ ಆಯ್ಕೆಯಾದ ನಂತರ ಮಹಾರಾಷ್ಟ್ರ ರಾಜ್ಯಸಭಾ ಸ್ಥಾನಕ್ಕೆ ಚಿದಂಬರಂ ರಾಜೀನಾಮೆ
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರು ತಮ್ಮ ತವರು ರಾಜ್ಯವಾದ ತಮಿಳುನಾಡಿನಿಂದ ಮೇಲ್ಮನೆಗೆ ಹೊಸ ಅವಧಿಗೆ ಆಯ್ಕೆಯಾದ ನಂತರ ಮಹಾರಾಷ್ಟ್ರದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ...

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರು ತಮ್ಮ ತವರು ರಾಜ್ಯವಾದ ತಮಿಳುನಾಡಿನಿಂದ ಮೇಲ್ಮನೆಗೆ ಹೊಸ ಅವಧಿಗೆ ಆಯ್ಕೆಯಾದ ನಂತರ ಮಹಾರಾಷ್ಟ್ರದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ 41 ವಿಜೇತರಲ್ಲಿ ಚಿದಂಬರಂ ಅವರು ಸಹ ಒಬ್ಬರಾಗಿದ್ದಾರೆ.
"ತಮಿಳುನಾಡಿನಿಂದ ರಾಜ್ಯಸಭೆಗೆ ನಾನು ಆಯ್ಕೆಯಾದ ನಂತರ, ಮಹಾರಾಷ್ಟ್ರದಿಂದ ಆಯ್ಕೆಯಾಗಿದ್ದ ನನ್ನ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ. ಅದರ ಪ್ರಕಾರ, ಇಂದು ನಾನು ಮಹಾರಾಷ್ಟ್ರದ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ" ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
"ರಾಜ್ಯಸಭೆಯ ಗೌರವಾನ್ವಿತ ಅಧ್ಯಕ್ಷರು ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮಹಾರಾಷ್ಟ್ರ ರಾಜ್ಯವನ್ನು ಪ್ರತಿನಿಧಿಸಿದ್ದು ನನ್ನ ಪುಣ್ಯ. ಭವಿಷ್ಯದಲ್ಲಿ ಮಹಾರಾಷ್ಟ್ರದ ಜನ ಶಾಂತಿ ಮತ್ತು ಸಮೃದ್ಧಿಯನ್ನು ಬಯಸುತ್ತೇನೆ" ಎಂದು ಮಾಜಿ ಕೇಂದ್ರ ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


