ನವದೆಹಲಿ: ಪೊಲೀಸರಿಂದ ದೌರ್ಜನ್ಯ, ಕಾಂಗ್ರೆಸ್ ಮುಖಂಡರಿಂದ ಸ್ಪೀಕರ್ ಗೆ ದೂರು
ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ವಿರೋಧಿಸಿ ಪ್ರತಿಭಟನಾನಿರತ ಕಾಂಗ್ರೆಸ್ ಪಕ್ಷದ ಕೆಲ ಸಂಸದರ ಮೇಲೆ ದೆಹಲಿ ಪೊಲೀಸರ ದೌರ್ಜನ್ಯ ಕುರಿತಂತೆ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಯಿತು.

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ವಿರೋಧಿಸಿ ಪ್ರತಿಭಟನಾನಿರತ ಕಾಂಗ್ರೆಸ್ ಪಕ್ಷದ ಕೆಲ ಸಂಸದರ ಮೇಲೆ ದೆಹಲಿ ಪೊಲೀಸರ ದೌರ್ಜನ್ಯ ಕುರಿತಂತೆ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಯಿತು.
ನಂತರ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನೇತೃತ್ವದಲ್ಲಿನ ನಿಯೋಗ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧಿರ್ ರಂಜನ್ ಚೌಧರಿ, ಪೊಲೀಸರಿಂದ ಆಗುತ್ತಿರುವ ದೌರ್ಜನ್ಯ ಹಾಗೂ ಹಿಂಸಾಚಾರದ ಬಗ್ಗೆ ವಿವರವಾಗಿ ಸ್ಪೀಕರ್ ಗೆ ತಿಳಿಸಿದ್ದೇವೆ ಎಂದರು.
ಕಾಂಗ್ರೆಸ್ ಸಂಸದರು ಮತ್ತು ಕಾರ್ಯಕರ್ತರ ಮೇಲೆ ಪೂರ್ವ ಯೋಜಿತ ಸಂಚಿನಂತೆ ಹಲ್ಲೆ ಮಾಡುತ್ತಿರುವ ದೆಹಲಿ ಪೊಲೀಸರ ವರ್ತನೆ ಬಗ್ಗೆ ಸ್ಪೀಕರ್ ಅವರೊಂದಿಗೆ ಮಾತನಾಡಿರುವುದಾಗಿ ಅವರು ಹೇಳಿದರು.
ಪೊಲೀಸ್ ಠಾಣೆಗಳಲ್ಲಿಯೂ ದೆಹಲಿ ಪೊಲೀಸರು, ಕಾಂಗ್ರೆಸ್ ಸಂಸದರು ಹಾಗೂ ಕಾರ್ಯಕರ್ತರನ್ನು ಉಗ್ರರಂತೆ ಕಾಣುತ್ತಿದ್ದಾರೆ. ರಾಹುಲ್ ಗಾಂಧಿ ವಿಚಾರಣೆಗೆ ನಾವು ಆಕ್ಷೇಪ ವ್ಯಕ್ತಪಡಿಸುತ್ತಿಲ್ಲ, ಸೇಡಿನ ಮತ್ತು ಹಿಂಸಾತ್ಮಕ ರಾಜಕೀಯವನ್ನು ಬಳಸಬೇಡಿ ಎಂದು ನಾವು ಹೇಳಲು ಬಯಸುತ್ತೇವೆ ಎಂದು ಚೌಧರಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


