ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದ ಇಡಿ

ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಮುಂದಿನ ವಾರಕ್ಕೆ ಮುಂದೂಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದ ಇಡಿ
ರಾಹುಲ್ ಗಾಂಧಿ
Published On :

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಮುಂದಿನ ವಾರಕ್ಕೆ ಮುಂದೂಡಿದೆ.

ತಮ್ಮ ತಾಯಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಕಾರಣ ಜೂನ್ 17ರಿಂದ ಜೂನ್ 20ರವರೆಗೆ ತಮ್ಮ ವಿಚಾರಣೆಯನ್ನು ಮುಂದೂಡುವಂತೆ ಜಾರಿ ನಿರ್ದೇಶನಾಲಯಕ್ಕೆ ರಾಹುಲ್ ಗಾಂಧಿ ಮನವಿ ಮಾಡಿದ್ದರು. ಅದರಂತೆ ಇಡಿ ವಿಚಾರಣೆಯನ್ನು ಮುಂದೂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 17ರಂದು ನಿಗದಿಯಾಗಿರುವ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಇಡಿ ತನಿಖಾಧಿಕಾರಿಗೆ ಕಾಂಗ್ರೆಸ್ ಸಂಸದ ಪತ್ರ ಬರೆದಿದ್ದರು.

ಕೋವಿಡ್-19 ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

51 ವರ್ಷದ ರಾಹುಲ್ ಗಾಂಧಿ ಕಳೆದ ಮೂರು ದಿನಗಳಲ್ಲಿ ಇಡಿ ತನಿಖಾಧಿಕಾರಿಗಳ ಮುಂದೆ ಸುಮಾರು 30 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ರಾಹುಲ್ ಗಾಂಧಿ ಹೇಳಿಕೆಯನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾಗಿದೆ.

ರಾಹುಲ್ ಗಾಂಧಿ ವಿರುದ್ಧದ ಇಡಿ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ಇದೊಂದು ದ್ವೇಷದ ರಾಜಕೀಯ ಎಂದು ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.