ಭಾರತದಿಂದ ಪೃಥ್ವಿ-2 ಪರಮಾಣು ಸಾಮರ್ಥ್ಯ ಕ್ಷಿಪಣಿ ಪ್ರಾಯೋಗಿಕ ಪರೀಕ್ಷೆ ಯಶಸ್ವಿ
ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಪರಮಾಣು ಸಾಮರ್ಥ್ಯದ ಪೃಥ್ವಿ-II ಕ್ಷಿಪಣಿಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ.

ಒಡಿಶಾ: ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಪರಮಾಣು ಸಾಮರ್ಥ್ಯದ ಪೃಥ್ವಿ-II ಕ್ಷಿಪಣಿಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.
ಬುಧವಾರ ರಾತ್ರಿ ಸುಮಾರು 7-30ರ ಸುಮಾರಿನಲ್ಲಿ ಒಡಿಶಾದ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ-2 ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಕ್ಷಿಪಣಿಯು ಅತ್ಯಂತ ಹೆಚ್ಚಿನ ಮಟ್ಟದ ನಿಖರತೆಯೊಂದಿಗೆ ಗುರಿ ಹೊಡೆಯುವ ಸಾಮರ್ಥ್ಯವನ್ನು ಹೊಂದಿದೆ. ಪೃಥ್ವಿ-2 ಕ್ಷಿಪಣಿಗಳ ಪರೀಕ್ಷೆಯು ಯಶಸ್ವಿಯಾಗಿ ಉಡಾವಣೆಯಾಗಿದೆ ಮತ್ತು ಪರೀಕ್ಷೆಯು ಎಲ್ಲಾ ನಿಯತಾಂಕಗಳನ್ನು ಪೂರೈಸಿದೆ ಎಂದು ಡಿಆರ್ ಡಿಒ ತಿಳಿಸಿದೆ.
350 ಕಿಮೀ ಸ್ಟ್ರೈಕ್ ರೇಂಜ್ ಹೊಂದಿರುವ ನೆಲದಿಂದ ನೆಲಕ್ಕೆ ಜಿಗಿಯುವ ಪರಮಾಣು ಸಾಮರ್ಥ್ಯದ ಕ್ಷಿಪಣಿ ಪ್ರಯೋಗ ಯಶಸ್ವಿಯಾಗಿ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


