ಅಗ್ನಿಪಥ್ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ, ಡಿಸೆಂಬರ್‌ನಲ್ಲಿ ಮೊದಲ ಅಗ್ನಿವೀರರಿಗೆ ತರಬೇತಿ: ಸೇನಾ ಮುಖ್ಯಸ್ಥ
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಮಧ್ಯೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಶೀಘ್ರದಲ್ಲೇ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಮಧ್ಯೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಶೀಘ್ರದಲ್ಲೇ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.
ಕೇಂದ್ರ ಸರ್ಕಾರ ಅಗ್ನಿಪಥ್ ನೇಮಕಾತಿ ಪ್ರಕ್ರಿಯೆ ಆರಂಭದ ಬಗ್ಗೆ ಅಧಿಕೃತ ದಿನಾಂಕವನ್ನು ಇನ್ನೂ ಘೋಷಿಸಿಲ್ಲ. ಆದರೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಮತ್ತು ಡಿಸೆಂಬರ್ 2022 ರಲ್ಲಿ ಮೊದಲ ಅಗ್ನಿವೀರರಿಗೆ ತರಬೇತಿಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.
ಇಂದು ಎಎನ್‌ಐ ಜೊತೆಗಿನ ವಿಶೇಷ ಸಂವಾದದಲ್ಲಿ ಮಾತನಾಡಿದ ಮನೋದ್ ಪಾಂಡೆ ಅವರು, "ನೇಮಕಾತಿ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇನ್ನೆರಡು ದಿನಗಳಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗುವುದು. ಅದರ ನಂತರ ನೋಂದಣಿ ಮತ್ತು ರ್ಯಾಲಿ ಬಗ್ಗೆ ನಮ್ಮ ಸೇನಾ ನೇಮಕಾತಿ ಸಂಸ್ಥೆಗಳು ವಿವರವಾದ ವೇಳಾಪಟ್ಟಿಯನ್ನು ಘೋಷಿಸುತ್ತವೆ" ಎಂದಿದ್ದಾರೆ.
"ಅಗ್ನಿವೀರರು ನೇಮಕಾತಿ ತರಬೇತಿ ಕೇಂದ್ರಗಳಿಗೆ ಹೋಗುವ ಬಗ್ಗೆ ಉತ್ತರಿಸಿದ ಸೇನಾ ಮುಖ್ಯಸ್ಥರು, ಮೊದಲ ಅಗ್ನಿವೀರರಿಗೆ ಈ ಡಿಸೆಂಬರ್‌ನಲ್ಲಿ(2022 ರಲ್ಲಿ) ತರಬೇತಿ ಕೇಂದ್ರಗಳಲ್ಲಿ ತರಬೇತಿಯು ಪ್ರಾರಂಭವಾಗುತ್ತದೆ. ಸಕ್ರಿಯ ಸೇವೆಯು2023 ರ ಮಧ್ಯದಲ್ಲಿ ಪ್ರಾರಂಭವಾಗುತ್ತದೆ" ಎಂದು ಹೇಳಿದ್ದಾರೆ.
ಕೊರೋನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ ನೇಮಕಾತಿ ನಡೆದಿಲ್ಲ. 2019-2020 ರಲ್ಲಿ ಸೇನೆಯು ಜವಾನರನ್ನು ನೇಮಿಸಿಕೊಂಡಿತು ಮತ್ತು ಅಂದಿನಿಂದ ಯಾವುದೇ ನೇಮಕಾತಿ ನಡೆದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


