'ಅಗ್ನಿವೀರ'ರಿಗೆ ಕೇಂದ್ರ ಸಶಸ್ತ್ರ ಮೀಸಲು ಪಡೆ, ಅಸ್ಸಾಂ ರೈಫಲ್ಸ್ ನಲ್ಲಿ ಶೇ.10ರಷ್ಟು ಮೀಸಲಾತಿ: ಗೃಹ ಸಚಿವಾಲಯ
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(CAPF) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ಗಳಿಗಾಗಿ ಶೇ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸಲು ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(CAPF) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ಗಳಿಗಾಗಿ ಶೇ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸಲು ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ.
ಕೇಂದ್ರ ಸಶಸ್ತ್ರ ಪಡೆಗಳಲ್ಲಿ ಸೈನಿಕರನ್ನು ಅಲ್ಪಾವಧಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಕಟಿಸಿರುವ 'ಅಗ್ನಿಪಥ್' ಯೋಜನೆಗೆ ಹಲವು ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆಗಳ ನಡುವೆ ಗೃಹ ಸಚಿವಾಲಯ ಈ ಪ್ರಕಟಣೆ ಹೊರಡಿಸಿದೆ.
ಈ ಯೋಜನೆಯಡಿ ನೇಮಕಗೊಂಡ ಸೈನಿಕರನ್ನು 'ಅಗ್ನಿವೀರ್ಸ್' ಎಂದು ಕರೆಯಲಾಗುತ್ತದೆ. "ಗೃಹ ವ್ಯವಹಾರಗಳ ಸಚಿವಾಲಯವು (MHA) CAPF ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ಗಳಿಗಾಗಿ ಶೇಕಡಾ 10ರಷ್ಟು ಖಾಲಿ ಹುದ್ದೆಗಳನ್ನು ಕಾಯ್ದಿರಿಸಲು ನಿರ್ಧರಿಸಿದೆ ಎಂದು ಗೃಹ ಸಚಿವರ ಕಚೇರಿ ಟ್ವೀಟ್‌ನಲ್ಲಿ ತಿಳಿಸಿದೆ.
CAPF ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ 'ಅಗ್ನಿವೀರ್ಸ್' ಗೆ ವಯಸ್ಸಿನ ಸಡಿಲಿಕೆಯನ್ನು MHA ಘೋಷಿಸಿತ್ತು. ತನ್ನ ಎರಡನೇ ಟ್ವೀಟ್‌ನಲ್ಲಿ, ಗೃಹ ಸಚಿವರ ಕಚೇರಿಯು, "ಸಿಎಪಿಎಫ್‌ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲು MHA ನಿರ್ಧರಿಸಿದೆ. ಇದಲ್ಲದೆ, ಅಗ್ನಿವೀರ್‌ನ ಮೊದಲ ತಂಡಕ್ಕೆ, ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 5 ವರ್ಷಗಳವರೆಗೆ ವಯಸ್ಸಿನ ಸಡಿಲಿಕೆ ಇರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


