ಅಗ್ನಿಪಥ್ ನೊಂದಿಗೆ ಬಿಜೆಪಿ ತನ್ನ ಸ್ವಂತ ಸಶಸ್ತ್ರ ಪಡೆ ರಚಿಸಿಕೊಳ್ಳುವ ಪ್ರಯತ್ನ: ಮಮತಾ ಬ್ಯಾನರ್ಜಿ
ಅಗ್ನಿಪಥ್ ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹೊಸ ಸೇನಾ ನೇಮಕಾತಿ ಯೋಜನೆ ಮೂಲಕ ಬಿಜೆಪಿ ತನ್ನ ಸ್ವಂತ ಸಶಸ್ತ್ರ ಪಡೆ ರಚಿಸಿಕೊಳ್ಳಲು ಪ್ರಯತ್ನದಲ್ಲಿದೆ ಎಂದು ಆರೋಪಿಸಿದ್ದಾರೆ.

ಕೊಲ್ಕತ: ಅಗ್ನಿಪಥ್ ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹೊಸ ಸೇನಾ ನೇಮಕಾತಿ ಯೋಜನೆ ಮೂಲಕ ಬಿಜೆಪಿ ತನ್ನ ಸ್ವಂತ ಸಶಸ್ತ್ರ ಪಡೆ ರಚಿಸಿಕೊಳ್ಳಲು ಪ್ರಯತ್ನದಲ್ಲಿದೆ ಎಂದು ಆರೋಪಿಸಿದ್ದಾರೆ.
ಅಗ್ನಿಪಥ್ ಯೋಜನೆ ಸಶಸ್ತ್ರ ಪಡೆಯನ್ನು ಅಪಮಾನಿಸುತ್ತಿದೆ ಎಂದಿರುವ ಬ್ಯಾನರ್ಜಿ, ಅಗ್ನಿವೀರರನ್ನು ನಾಲ್ಕು ವರ್ಷ ಸೇವೆ ಸಲ್ಲಿಸಿದ ಬಳಿಕ ಬಿಜೆಪಿ ತನ್ನ ಪಕ್ಷದ ವಾಚ್ ಮ್ಯಾನ್ ಗಳಾಗಿ ನೇಮಿಸಿಕೊಂಡರೂ ಅಚ್ಚರಿಪಡಬೇಕಾಗಿಲ್ಲ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ಹೇಳಿದರು.
ಈ ಯೋಜನೆ ಮೂಲಕ ಬಿಜೆಪಿ ತನ್ನ ಸ್ವಂತ ಸಶಸ್ತ್ರ ಪಡೆ ರಚಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ. ನಾಲ್ಕು ವರ್ಷಗಳ ನಂತರ ಅವರು ಏನು ಮಾಡ್ತಾರೆ? ಯುವಕರ ಕೈಗೆ ಸಶಸ್ತ್ರ ಕೊಡಲು ಬಿಡೆಪಿ ಬಯಸಿದೆಯೇ? ಎಂದು ಪ್ರಶ್ನಿಸಿರುವ ಮಮತಾ ಬ್ಯಾನರ್ಜಿ,2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಯೋಜನೆ ಘೋಷಿಸುವ ಮೂಲಕ ಬಿಜೆಪಿ ಜನರನ್ನು ದಡ್ಡರನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿವರ್ಷ ಎರಡು ಕೋಟಿ ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ, ಇಂತಹ ಯೋಜನೆ ಘೋಷಣೆ ಮೂಲಕ ದೇಶದ ಜನರನ್ನು ವಂಚಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದರು. ಮಮತಾ ಬ್ಯಾನರ್ಜಿ ಹೇಳಿಕೆ ವಿರೋಧಿಸಿ ಬಿಜೆಪಿ ಶಾಸಕರು ಸದನದಿಂದ ಹೊರ ನಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


