ಕಾಂಗ್ರೆಸ್ ನಾಯಕರಿಂದ ರಾಷ್ಟ್ರಪತಿ ಕೋವಿಂದ್ ಭೇಟಿ; ಸಂಸದರೊಂದಿಗೆ ಪೊಲೀಸರ ‘ಕೆಟ್ಟ ವರ್ತನೆ’ ವಿರುದ್ಧ ದೂರು
ಕಾಂಗ್ರೆಸ್ ಹಿರಿಯ ನಾಯಕರ ನಿಯೋಗ ಸೋಮವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ....

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕರ ನಿಯೋಗ ಸೋಮವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪಕ್ಷದ ಸಂಸದರೊಂದಿಗೆ ಪೊಲೀಸರು ಕೆಟ್ಟದಾಗಿ ನಡೆದುಕೊಂಡ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.
ಕಾಂಗ್ರೆಸ್ ಮುಖಂಡರು ಅಗ್ನಿಪಥ ಯೋಜನೆ ಬಗ್ಗೆಯೂ ಪ್ರಸ್ತಾಪಿಸಿ ಅದನ್ನು ಹಿಂದಕ್ಕೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ನಿಯೋಗದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಹಿರಿಯ ನಾಯಕರಾದ ಪಿ ಚಿದಂಬರಂ, ಜೈರಾಮ್ ರಮೇಶ್ ಮತ್ತು ಕೆ ಸಿ ವೇಣುಗೋಪಾಲ್ ಇದ್ದರು.
ಇಡಿ ವಿರುದ್ಧದ ತಮ್ಮ ಪ್ರತಿಭಟನೆಯ ವೇಳೆ ಪಕ್ಷದ ಸಂಸದರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕಚೇರಿಗೆ ನುಗ್ಗಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ದೆಹಲಿ ಪೊಲೀಸರ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


