ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಶೂಟರ್ ಗಳ ಬಂಧನ
ಪ್ರಮುಖ ಬೆಳವಣಿಗೆಯಲ್ಲಿ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪ್ರಮುಖ ಶೂಟರ್‌ಗಳನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಚಂಡೀಗಡ: ಪ್ರಮುಖ ಬೆಳವಣಿಗೆಯಲ್ಲಿ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪ್ರಮುಖ ಶೂಟರ್‌ಗಳನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಇದೇ ವೇಳೆ ಇಬ್ಬರು ಆರೋಪಿಗಳಿಂದ ಪೊಲೀಸರು ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಹರಿಯಾಣ ಮೂಲದ ದರೋಡೆಕೋರ ಪ್ರಿಯವ್ರತ್ ಅಲಿಯಾಸ್ ಫೌಜಿ(26) ಹಾಗೂ ಮತ್ತೊಬ್ಬ ಆರೋಪಿ ಕಾಶಿಶ್ ಅಲಿಯಾಸ್ ಕುಲದೀಪ್ (24) ಎಂದು ಗುರುತಿಸಲಾಗಿದೆ.
ರಾಮಕರನ್ ಗ್ಯಾಂಗ್ ನ ಸದಸ್ಯನಾಗಿದ್ದ ಈತ ಶಾರ್ಪ್ ಶೂಟರ್ ಆಗಿ ಕೆಲಸ ಮಾಡುತ್ತಿದ್ದ. ಶಾರ್ಪ್ ಶೂಟರ್‌ಗಳನ್ನು ಗುಜರಾತ್‌ನ ಮುಂದ್ರಾದಲ್ಲಿ ಬಂಧಿಸಲಾಗಿದೆ. ಇದಕ್ಕೂ ಮುನ್ನ ಪಂಜಾಬ್ ಪೊಲೀಸರು ಮೇ 29 ರಂದು ನಡೆದ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಎಂಟು ಶಾರ್ಪ್ ಶೂಟರ್ ಗಳನ್ನು ಗುರುತಿಸಿದ್ದರು.
ಕಳೆದ ತಿಂಗಳು ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


