ದೇಶ

ಗುಜರಾತ್‌ನ ಏಕತಾ ಪ್ರತಿಮೆ ಬಳಿ 3.1 ತೀವ್ರತೆಯ ಭೂಕಂಪನ; ಯಾವುದೇ ಹಾನಿಯಾಗಿಲ್ಲ: ಅಧಿಕಾರಿಗಳು

ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರತೆಯ ಭೂಕಂಪನ ದಾಖಲಾಗಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಗುಜರಾತ್‌ನ ಏಕತಾ ಪ್ರತಿಮೆ ಬಳಿ 3.1 ತೀವ್ರತೆಯ ಭೂಕಂಪನ; ಯಾವುದೇ ಹಾನಿಯಾಗಿಲ್ಲ: ಅಧಿಕಾರಿಗಳು
ಏಕತಾ ಪ್ರತಿಮೆ
Published On :

ಅಹಮದಾಬಾದ್: ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರತೆಯ ಭೂಕಂಪನ ದಾಖಲಾಗಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕೆವಾಡಿಯಾ ಗ್ರಾಮದ ಬಳಿ 182 ಮೀಟರ್ ಎತ್ತರದ ಏಕತಾ ಪ್ರತಿಮೆಯಿದೆ. ಸೋಮವಾರ ರಾತ್ರಿ ಕಂಪನ ದಾಖಲಾಗಿದೆ. ಪ್ರಬಲ ಭೂಕಂಪಗಳು ಮತ್ತು ಚಂಡಮಾರುತಗಳನ್ನು ತಡೆದುಕೊಳ್ಳುವ ರೀತಿಯಲ್ಲಿ ನಿರ್ಮಿಸಲಾದ ಏಕತಾ ಪ್ರತಿಮೆಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಮಾರಕದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಹುಲ್ ಪಟೇಲ್ ಹೇಳಿದ್ದಾರೆ.

ಕಂಪನದ ಕೇಂದ್ರಬಿಂದು ಕೆವಾಡಿಯಾದಿಂದ ಪೂರ್ವ-ಆಗ್ನೇಯಕ್ಕೆ 12 ಕಿಮೀ ದೂರದಲ್ಲಿದೆ ಎಂದು ಗಾಂಧಿನಗರ ಮೂಲದ ಭೂಕಂಪನ ಸಂಶೋಧನಾ ಸಂಸ್ಥೆ (ಐಎಸ್‌ಆರ್) ಹೇಳಿಕೆಯಲ್ಲಿ ತಿಳಿಸಿದೆ.

"ಸೋಮವಾರ ರಾತ್ರಿ 10.07 ಗಂಟೆಗೆ 3.1 ತೀವ್ರತೆಯ ಕಂಪನವು ದಾಖಲಾಗಿದ್ದು, ದಕ್ಷಿಣ ಗುಜರಾತ್‌ನ ಕೆವಾಡಿಯಾದಿಂದ ಪೂರ್ವ-ಆಗ್ನೇಯಕ್ಕೆ 12 ಕಿಮೀ ದೂರದಲ್ಲಿ 12.7 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದು ದಾಖಲಾಗಿದೆ  ಎಂದು ಐಎಸ್‌ಆರ್‌ ತಿಳಿಸಿದೆ. 

ಕಂಪನದಿಂದಾಗಿ ಈ ಪ್ರದೇಶದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ವರದಿಯಾಗಿಲ್ಲ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.