ದೇಶ

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಕೊರೋನಾ ಪಾಸಿಟಿವ್; ಆಸ್ಪತ್ರೆ ದಾಖಲು

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಕೊರೋನಾ ಪಾಸಿಟಿವ್; ಆಸ್ಪತ್ರೆ ದಾಖಲು
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ
Published On :

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ರಾಜ್ಯಪಾಲರಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆ 80 ವರ್ಷದ ಭಗತ್ ಸಿಂಗ್ ಕಶ್ಯಪ್ ಅನ್ನು ದಕ್ಷಿಣ ಮುಂಬೈನಲ್ಲಿ ಇರುವ ರಿಲಾಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದ್ದು, ಕಳೆದ ಮಂಗಳವಾರ ಒಂದೇ ದಿನ 3,659 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಪೈಕಿ ಮುಂಬೈ ಒಂದರಲ್ಲಿಯೇ 1,781 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಒಂದು ಸಾವಿನ ಪ್ರಕರಣ ಪತ್ತೆಯಾಗಿತ್ತು. ರಾಜ್ಯದಲ್ಲಿ ಇದುವರೆಗೂ ಒಟ್ಟು 79,41,762 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸಾವಿನ ಪ್ರಕರಣಗಳ ಸಂಖ್ಯೆ 1,47,889ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.