ಮಹಾರಾಷ್ಟ್ರ ಸಿಎಂಗೆ ಕೊರೋನಾ ಪಾಸಿಟಿವ್: ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಧವ್ ಠಾಕ್ರೆ ಸಂಪುಟ ಸಭೆ
ಮಹಾರಾಷ್ಟ್ರ ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವೀಕ್ಷಕ ಕಮಲ್ ನಾಥ್ ಅವರು ಬುಧವಾರ ಮಾಹಿತಿ ನೀಡಿದ್ದಾರೆ.

ಮುಂಬೈ: ಮಹಾರಾಷ್ಟ್ರ ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವೀಕ್ಷಕ ಕಮಲ್ ನಾಥ್ ಅವರು ಬುಧವಾರ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಧವ್ ಠಾಕ್ರೆಯವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಿಟ್ಟಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಂಪುಟ ಸಭೆ ಆರಂಭಿಸಿದ್ದಾರೆ. ಕೊರೊನಾ ಸೋಂಕು ತಗುಲಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.
ಪಕ್ಷೇತರ ಶಾಸಕರ ಜೊತೆ ಶಿವಸೇನೆ ಶಾಸಕರು ಗುವಾಹಟಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಈ ಹಿನ್ನೆಲೆಯಲ್ಲಿ ಸಂಪುಟ ಸಭೆ ನಡೆಸಲಾಗುತ್ತಿದೆ.
ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವರಾಗಿದ್ದ ಏಕನಾಥ್ ಶಿಂಧೆ ಬಂಡಾಯವೆದ್ದಿದ್ದು, ವಿಧಾನ ಪರಿಷತ್ ಮತ್ತು ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲೇ 10ಕ್ಕೂ ಹೆಚ್ಚು ಸೇನಾ ಶಾಸಕರೊಂದಿಗೆ ಸೂರತ್‌ಗೆ ತೆರಳಿದ್ದರು. ನಂತರ 26ಕ್ಕೂ ಹೆಚ್ಚು ಶಾಸಕರು ಠಾಕ್ರೆ ವಿರುದ್ಧ ಬಂಡಾಯವೆದ್ದು, ಶಿಂಧೆ ಜೊತೆ ಗುಜರಾತ್‌ಗೆ ತೆರಳಿದ್ದರು. ಇದೀಗ ರೆಬೆಲ್ ಶಾಸಕರನ್ನ ಸೂರತ್‌ನಿಂದ ಅಸ್ಸಾಂಗೆ ಸ್ಥಳಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


